ಮಹರ್ಷಿ ವಾಲ್ಮೀಕಿ ಇತಿಹಾಸ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು – ಭಟ್ಕಳ ತಹಸೀಲ್ದಾರ್ ಶ್ರೀ ರವಿಚಂದ್ರ

ವರದಿ-ಕುಮಾರ ನಾಯ್ಕ, ಉಪಸಂಪಾದಕರು

ಜಿಲ್ಲಾ ಸುದ್ದಿಗಳು 

ಭಟ್ಕಳ್

ವಾಲ್ಮೀಕಿ ಇತಿಹಾಸ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಭಟ್ಕಳ್ ತಹಸೀಲ್ದಾರ್ ರವಿಂಚಂದ್ರ ಅವರು ತಿಳಿಸಿದರು.ಭಟ್ಕಳತಾಲೂಕಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕ ಆಡಳಿತ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಸಭಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲ ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಡೆಯುವ ಕೆಲಸವಾಗಬೇಕು. ರಾಮಾಯಣದಂತಹ ಮಹಾ ಕಾವ್ಯವನ್ನು ರಚಿಸಿರುವ ವಾಲ್ಮೀಕಿ ಆದಿಕವಿಯನ್ನು ಸ್ಮರಿಸುವ ದಿನವಾಗಿದೆ. ಪ್ರತಿಯೊಬ್ಬರು ಇವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಇವರ ಜೀವನ ಚರಿತ್ರೆಯನ್ನು ಅರಿಯಬೇಕು ಎಂದರು.

CHETAN KENDULI

ಕ್ಷೇತ್ರ ಶಿಕ್ಷಣ ಅಧಿಕಾರಿ ಮಾತನಾಡಿ, ರಾಮಾಯಣವನ್ನು ಸಂಸ್ಕೃತದಲ್ಲಿ ಬರೆದ ಮೊದಲ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಯಾಗಿದ್ದಾರೆ. ಪ್ರತಿ ವರ್ಷ ಅ.೨೦ರಂದು ಇವರ ಜಯಂತಿಯನ್ನು ಬಹಳ ಅದ್ದೂರಿಯಾಗಿ ಆಚರಿಸುತ್ತಾರೆ. ಆದರೆ ಕೋವಿಡ್ ಹರಡುವ ಭೀತಿಯಿಂದಾಗಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೇಧಿಕೆಯಲ್ಲಿ ತಾಲೂಕ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಭಾಕರ್ ಚಿಕ್ಕನ ಮನೆ , ಜಾಲಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ವೆರ್ಣೇಕರ್, ಯಲ್ಲಮ್ಮ , ಭಂಡಾರಿ, ಉಪಸ್ಥಿತರಿದ್ದರು, ಶಿಕ್ಷಕ ಪರಮೇಶ್ವರ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಸರ್ಕಾರಿ ಎಲ್ಲ ಇಲಾಖೆಯ ಶಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Be the first to comment

Leave a Reply

Your email address will not be published.


*