ರಾಜ್ಯ ಸುದ್ದಿಗಳು
ಬೆಂಗಳೂರು:
ಮಹಾನಗರದ ಬೈಯಪ್ಪನಹಳ್ಳಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ರಫೀಕ್ ಮುಲ್ಲಾ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.ರಫೀಕ್ ಎಂದಿನಂತೆ ಬೆಳಗ್ಗೆ ಎದ್ದು ಸ್ಥಾನಕ್ಕೆ ತೆರಳಿದಾಗ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸುವ ಸಮಯದಲ್ಲಿಯೇ ರಫೀಕ್ ಮೃತಾಪಟ್ಟಿದ್ದಾರೆ ಎಂದು ಕುಟುಂಬ ಮೂಲದಿಂದ ತಿಳಿದಿದೆ.ಇದೇ ವೇಳೆಯಲ್ಲಿ ರಫೀಕ್ ಮುಲ್ಲಾ ಅವರಿಗೆ ಪೊಲೀಸ್ ಇಲಾಖೆಯ ಸಕಲ ಗೌರವವನ್ನು ನೀಡಲಾಯಿತು.ಗೋವು ಪ್ರೀಯ ರಫೀಕ್:
ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಗೋವುಗಳಿಗೆ ರಕ್ಷಣೆ ನೀಡಿ ಅವುಗಳಿಗೆ ಆಹಾರ ನೀಡಿ ಆರೈಕೆ ಮಾಡುತ್ತಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕರುವೊಂದನ್ನು ಸಾಕುತ್ತಿದ್ದರು. ಆ ಬಳಿಕ ವರ್ಗಾವಣೆಗೊಂಡಾಗ ಆ ಕರುವನ್ನು ಜೊತೆಯಲ್ಲೇ ಕರೆದೊಯ್ದು ಪ್ರಾಣಿ ಪ್ರೀತಿ ತೋರಿಸಿದ್ದರು.
Be the first to comment