ಓವರಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಚರಂತಿಮಠ ಚಾಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ : ಬಾಗಲಕೋಟೆ ನಗರಸಭೆ ಆವರಣದಲ್ಲಿ 50 ಸಾವಿರ ಲೀಟರ್ ಸಾಮಥ್ರ್ಯದ ಓವರ್‍ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸುವ ಮೂಲಕ ಗುರುವಾರ ಚಾಲನೆ ನೀಡಿದರು.

ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು 2019-20ನೇ ಸಾಲಿನ 14ನೇ ಹಣಕಾಸು ಯೋಜನೆಯ ಉಳಿತಾಯ ಅನುದಾನದಡಿಯಲ್ಲಿ ಅಂದಾಜು 35 ಲಕ್ಷ ರೂ.ಗಳ ವೆಚ್ಚದಲ್ಲಿ ಓವರಟ್ಯಾಂಕ್ ನಿರ್ಮಿಸಲಾಗುತ್ತಿದ್ದು, ಇದರ ಸದುಪಯೋಗವಾಗುವಂತೆ ಮಾಡಲು ತಿಳಿಸಿದರು. ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರ ವೆಂಕಟೇಶ ಹಂದ್ರಾಳಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಘನತ್ಯಾಜ್ಯ ವಸ್ತು ವಿಲೇವಾರಿ ಮಾಡಲು ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಖರೀದಿಸಲಾದ 2 4 ವ್ಹಿಲರ್ ಮಿನಿ ಟಿಪ್ಪರ್‍ಗಳನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾದ್ಯಕ್ಷ ಬಸವರಾಜ ಅವರಾದಿ, ನಗರಸಭೆ ಸದಸ್ಯರು, ಪೌರಾಯುಕ್ತ ಮುನಿಷಾಮಪ್ಪ, ಬಿಟಿಡಿಎ ಪುನರ್ವಸತಿ ಅಧಿಕಾರಿ ಗಣಪತಿ ಪಾಟೀಲ ಸೇರಿದಂತೆ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸೇರಿ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*