ಜಿಲ್ಲಾ ಸುದ್ದಿಗಳು
ಮಂಗಳೂರು
ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದ್ದ ನಕ್ಸಲ್ ನಂಟಿನ ಪ್ರಕರಣ ಕೊನೆಗೂ ಅಂತ್ಯ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ 2012ರಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು. 2012ರ ಮಾರ್ಚ್ 03ರಂದು ನಕ್ಸಲ್ ನಿಗ್ರಹ ಪಡೆಯಿಂದ ವಿಠಲ ಮಲೆಕುಡಿಯ ಮತ್ತು ಆತನ ತಂದೆಯನ್ನು ಬಂಧಿಸಲಾಗಿತ್ತು.ವಿಠಲ್ ಬಂಧನವಾದಾಗ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಸೇರಿ ಕಮ್ಯುನಿಸ್ಟ್ ರಾಷ್ಟ್ರೀಯ ನಾಯಕರು ಮಂಗಳೂರು ಜೈಲಿಗೆ ಭೇಟಿ ನೀಡಿದ್ದರು. ಇಡೀ ದೇಶದಲ್ಲೇ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣದ ಅಂತಿಮ ತೀರ್ಪು ಇಂದು ಪ್ರಕಟವಾಗಿದೆ.
ವರ್ಷಗಳ ಹಿಂದಿನ ಆ ಪ್ರಕರಣದ ಅಂತಿಮ ತೀರ್ಪನ್ನು ಪ್ರಕಟಿಸಿರುವ ನ್ಯಾಯಾಲಯ ನಕ್ಸಲ್ ನಂಟಿನ (Naxal Link) ಆರೋಪದಿಂದ ವಿಠಲ್ ಮಲೆಕುಡಿಯ ಮತ್ತು ಆತನ ತಂದೆಯನ್ನು ಮುಕ್ತಗೊಳಿಸಿದೆ. ವಿಠಲ್ ಮಲೆಕುಡಿಯ ಅವರನ್ನು ನಕ್ಸಲ್ ನಂಟಿನ ಆರೋಪದಿಂದ ಮುಕ್ತಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
Be the first to comment