ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ಅ.೨೪ರಂದು ಸೂಲಿಬೆಲೆಯಲ್ಲಿ ೬ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ೬ನೇ ವರ್ಷದ ವಾರ್ಷಿಕೋತ್ಸವ ವೇದಿಕೆ ಕಾರ್ಯಕ್ರಮವನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಸಂತೆ ಮೈದಾನದಲ್ಲಿ ಅ.೨೪ರಂದು ನಡೆಯಲಿದ್ದು, ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಸಕಾಲಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜೈಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಬಿ.ಆರ್.ಮುನಿರಾಜ ತಿಳಿಸಿದರು. 

CHETAN KENDULI

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅ.೧೪ರಂದು ಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರದ ವಸಂತ ನಗರದಲ್ಲಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಭವನದಲ್ಲಿ ಚಿತ್ರದುರ್ಗದ ಮಾದಾರ ಮಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿರವರ ಉಪಸ್ಥಿತಿಯಲ್ಲಿ ಉದ್ಘಾಟನೆಯಾದ ಸಮಿತಿಯು ಅ.14, 2021ಕ್ಕೆ 6ನೇ ವರ್ಷ ತುಂಬಿ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಸಮಿತಿಯನ್ನು ಮತ್ತಷ್ಟು ಗಟ್ಟಿ ಮತ್ತು ಸದೃಢಗೊಳಿಸಲು ಪ್ರತಿಯೊಬ್ಬ ನಾಗರೀಕರು ಪಾಲ್ಗೋಳ್ಳಬೇಕು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರನ್ನು ಸಹ ಆಹ್ವಾನಿಸಲಾಗಿದೆ. ಈಗಾಗಲೇ ಕಾರ್ಯಕ್ರಮದ ರೂಪುರೇಷುಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಜೈ ಭೀಮ್ ಎಬಿಡಿಕೆಎಸ್‌ನ ರಾಜ್ಯಾಧ್ಯಕ್ಷ ಎಂ.ಮುನಿಭೈರಪ್ಪ, ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಕ್ಯಾಲಸನಹಳ್ಳಿ, ರಾಜ್ಯ ಗೌರವಾಧ್ಯಕ್ಷ (ಜೈಭೀಮ್ ದಲಿತ ಭೂ ರಕ್ಷಣಾ ವೇದಿಕೆ) ಕೆ.ಸಿ.ಪ್ರಸಾದ್, ಬೆಂಗಳೂರು ಪೂರ್ವ ತಾಲೂಕು ಪ್ರಧಾನ ಕಾರ್ಯದರ್ಶಿ ವಾಸುದೇವ ಇದ್ದರು.

Be the first to comment

Leave a Reply

Your email address will not be published.


*