ಘಾಟಿ ಸುಬ್ರಮಣ್ಯ ಬಳಿ ತಿರುವಿನಲ್ಲಿ ಹಳ್ಳಕ್ಕೆ ಉರುಳಿ ಬಿದ್ದ ಮದುವೆ ಬಸ್ ಇಬ್ಬರು ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ

ವರದಿ ಗಂಗರಾಜು.ಎನ್. ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

ದೊಡ್ಡಬಳ್ಳಾಪುರ

ಶ್ರೀಘಾಟಿ ಸುಬ್ರಹ್ಮಣ್ಯ ಬಸ್‌ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಏಳಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಈ ದುರಂತ ಸಂಭವಿದೆ. ದುರ್ಘಟನೆಯಲ್ಲಿ ಬೆಳಚಿಕ್ಕನಹಳ್ಳಿ ನಿವಾಸಿ ರಾಮಕೃಷ್ಣ ರೆಡ್ಡಿ (55) ಪಿ.ಎಸ್. ಕುಮಾರ್‌ (60) ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಹಾಗೂ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

CHETAN KENDULI

ತೊಂಡೇಭಾವಿ ಸಮೀಪದ ಬೆಳಚಿಕ್ಕನಹಳ್ಳಿಯವರ ಮದುವೆ ಘಾಟಿಯ ಖಾಸಗಿ ಕಲ್ಯಾಣಮಂಟಪದಲ್ಲಿ ಶನಿವಾರ ನಡೆದಿದ್ದು, ರಾತ್ರಿ ಆರತಕ್ಷತೆ ನಡೆದಿತ್ತು. ಹೀಗಾಗಿ ಗ್ರಾಮದಿಂದ ಸಾಕಷ್ಟು ಮಂದಿ ಆರತಕ್ಷತೆಗೆ ಆಗಮಿಸಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಬಸ್ಸಿನಲ್ಲಿ ವಾಪಾಸ್‌ ಹೋಗುವಾಗ, ಚಾಲಕನ ನಿಯಂತ್ರಣ ತಪ್ಪಿ ಮಾಕಳಿ ಹಾಗೂ ಘಾಟಿ ನಡುವಿನ ಹಳ್ಳದ ಬಳಿ ಬಸ್‌ ಉರುಳಿಬಿದ್ದಿದೆ.ಈ ವೇಳೆ ಅದೇ ಮಾರ್ಗದಲ್ಲಿ ಬಂದ ಸ್ಥಳೀಯ ಯುವಕರು ಆಂಬುಲೆನ್ಸ್‌ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್‌ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ರಾಮಕೃಷ್ಣರೆಡ್ಡಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯಲ್ಲಿ ರಾಮಕೃಷ್ಣರೆಡ್ಡಿ ಮೃತಪಟ್ಟಿದ್ದಾರೆ. ಕುಮಾರ್‌ (60) ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಸ್‌ ಬ್ರೇಕ್‌ ಫೇಲ್‌ ಆಗಿಲ್ಲ. ಚಾಲಕನ ನಿಯಂತ್ರಣ ತಪ್ಪಿ ನಡೆದಿರುವ ಸಾಧ್ಯತೆಯಿದೆ. ಆತ ಕುಡಿದು ವಾಹನ ಚಲಾಯಿಸಿದ್ದಾನೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Be the first to comment

Leave a Reply

Your email address will not be published.


*