ಗ್ರಾಮ ಪಂಚಾಯಿತಿ ನೌಕರರು ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಘಟಕರಾಗಿ ಪ್ರಯತ್ನಿಸೋಣ : ಡಾ. ದೇವಿ ಪ್ರಸಾದ್ ಬೊಲ್ಮ.

ವರದಿ-ಕುಮಾರ್ ನಾಯ್ಕ.ಉಪಸಂಪಾದಕರು

ಜಿಲ್ಲಾ ಸುದ್ದಿಗಳು 

 ಯಲ್ಲಾಪುರ

ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಿ ಸೂಕ್ತ ಸೌಲಭ್ಯ ಒದಗಿಸಬೇಕು
• ಗ್ರಾಮ ಪಂಚಾಯತ್ ನೌಕರರಿಗೆ ವಯೋಮಿತಿ ಮತ್ತು ವಿದ್ಯಾರ್ಹತೆಯನ್ನು ಪರಿಗಣಿಸಿದೆ ಒಂದು ಬಾರಿ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಬೇಕು.
• ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ನೇರ ನೇಮಕಾತಿ ಮಾಡಿಕೊಳ್ಳದೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಬೇಕು.
• ಗ್ರಾಮ ಪಂಚಾಯತ್ ನೌಕರರ ಸೇವಾ ಹಿರಿತನಕ್ಕೆ ಧಕ್ಕೆ ಬಾರದರೀತಿಯಲ್ಲಿಮುಂಬಡ್ತಿಯನ್ನುನೀಡಬೇಕು.ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್.ಡಿ.ಪಿ.ಆರ್. (ರಿ) ಉತ್ತರ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಮಟ್ಟದ ಗ್ರಾಮ ಪಂಚಾಯಿತಿ ನೌಕರರ ಸಮಾಲೋಚನಾ ಸಭೆಯು ಯಲ್ಲಾಪುರ ತಾಲೂಕು ಪಂಚಾಯತ್ ” ಗಾಂಧಿ ಕುಟೀರ” ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಗಂಗಾಧರ ಐ ನಾಯ್ಕ ರವರ ಅಧ್ಯಕ್ಷತೆಯಲ್ಲಿ ದಿನಾಂಕ 23-10-2021 ರಂದು ನಡೆಯಿತು.

CHETAN KENDULI


ಜಿಲ್ಲಾಮಟ್ಟದ ಸಮಾಲೋಚನ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಾದ ಶ್ರೀ ಪದ್ಮನಾಭ ಆರ್ ಕುಲಾಲ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ ನೌಕರರು ರಾಜ್ಯ ವ್ಯಾಪ್ತಿಯಲ್ಲಿ ಸಂಘಟಿತರಾಗಿ ಪಂಚಾಯತ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಘಟನೆಯ ಮುಖ್ಯ ಬೇಡಿಕೆಯಾದ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಜೊತೆಗೆ ಸೂಕ್ತ ಸೌಲತ್ತುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗಬೇಕು ಮತ್ತು ವಿವಿಧ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುವಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ನೌಕರರನ್ನು ಉದ್ದೇಶಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ರಾಜ್ಯಾಧ್ಯಕ್ಷರಾದ ಡಾ. ದೇವಿಪ್ರಸಾದ ಬೊಲ್ಮ ರವರು ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಒದಗಿಸಬೇಕು, ಪಂಚಾಯಿತಿ ನೌಕರರ ವೇತನ ಸಮಸ್ಯೆಯನ್ನು ಪರಿಹರಿಸಿ ಪ್ರತಿ ತಿಂಗಳು 5 ನೇ ತಾರೀಖಿನೊಳಗೆ ವೇತನ ಬಟವಾಡೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು, ರಾಜ್ಯ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಜಿಲ್ಲಾ ಪಂಚಾಯತ್ ಅನುಮೋದನೆ ಯಾಗದೆ ಬಾಕಿ ಇರುವ ನೌಕರರಿಗೆ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸದೆ, ಪಂಚಾಯತ ನೌಕರರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಒಂದು ಬಾರಿ ಎಲ್ಲಾ ನೌಕರರಿಗೂ ಜಿಲ್ಲಾ ಪಂಚಾಯತಿ ಅನುಮೋದನೆ ನೀಡಬೇಕು, ಗ್ರಾಮ ಪಂಚಾಯಿತಿ ಕಛೇರಿಗಳಲ್ಲಿ ಸೇವಾಭದ್ರತೆ ಹೊಂದದೇ ಕರ್ತವ್ಯ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಜಿಲ್ಲಾ ಪಂಚಾಯತ ಅನುಮೋದನೆ ನೀಡುವ ಮೂಲಕ ಸೇವಾ ಭದ್ರತೆ ಒದಗಿಸಬೇಕು, ಪಂಚಾಯತ್ ನೌಕರರಿಗೆ ಇಎಸ್ಐ ಭವಿಷ್ಯನಿಧಿ ಒದಗಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ತೊಡಕನ್ನು ಪರಿಹರಿಸಿ, ಎಲ್ಲಾ ನೌಕರರಿಗೆ ಇಎಸ್ಐ ಭವಿಷ್ಯನಿಧಿ ಸಿಗುವಂತೆ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹಕ್ಕೊತ್ತಾಯ ಮಾಡಿದರು. ಗ್ರಾಮ ಪಂಚಾಯತ್ ನೌಕರರು ಸರಕಾರದ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ಮುಷ್ಕರ ಮಾಡಬಾರದು, ನಮ್ಮ ನ್ಯಾಯಯುತ ಬೇಡಿಕೆಗಳನ್ನು ಪರಿಹಾರ ಕಂಡುಕೊಳ್ಳಲು ಸಂಘಟಿತರಾಗಿ ಹೋರಾಡುವ ಮೂಲಕ ಪ್ರಯತ್ನಪಡಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಜಿಲ್ಲಾ ಮಟ್ಟದ ಸಮಾಲೋಚನೆ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಮಸ್ಯೆಗಳ ಕುರಿತು ಪ್ರಸ್ತಾವಿಸಿ, ನೌಕರರು ಬೇಡಿಕೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಯೋಗೀಶ್ ನಾಯ್ಕ್ ರವರು, ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು, ತಾಲೂಕು ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಹೇಮಚಂದ್ರ ನಂದಳಿಕೆ ರವರು, ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷರಾದ ಶ್ರೀ ಸೈಫುಲ್ ನಲ್ಲೂರು ರವರು, ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*