ಜೆಡಿಎಸ್ ಪಕ್ಷ ಸಂಘಟನೆ ಮೂಲ ದ್ಯೇಯವಾಗಬೇಕು : ಶಾಸಕ 

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಪ್ರತಿ ಮುಖಂಡರು, ಕಾರ್ಯಕರ್ತರು ಜೆಡಿಎಸ್ ಪಕ್ಷ ಸಂಘಟನೆಯನ್ನು ಮೂಲ ದ್ಯೇಯವಾಗಿಟ್ಟುಕೊಳ್ಳಬೇಕು ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.ದೇವನಹಳ್ಳಿ ತಾಲೂಕಿನ ಆಲೂರುದುದ್ದನಹಳ್ಳಿ ಗ್ರಾಮದಲ್ಲಿ ತಾಲೂಕು ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಬೂತ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ತತ್ವ ಸಿದ್ದಾಂತಗಳನ್ನು ಮೆಚ್ಚಿ ವಿವಿಧ ಪಕ್ಷಗಳನ್ನು ತೊರೆದು ಹಲವಾರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಸ್ವಾಗತಾರ್ಹವಾಗಿದೆ. ಮುಂಬರುವ ಯಾವುದೇ ಚುನವಾಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು. ಪ್ರತಿ ಬೂತ್‌ನಲ್ಲಿ ಪಕ್ಷ ಸಂಘಟನೆಯನ್ನು ಮಾಡಬೇಕು. ಎಲ್ಲಾ ಬೂತ್ ಸಮಿತಿಗಳ ಪೈಕಿ ಇಲ್ಲಿ ಹೆಚ್ಚಿನ ಜನರು ಸೇರಿರುವುದು ಶ್ಲಾಘನೀಯ. ಪಕ್ಷ ಬಲಿಷ್ಠಗೊಳ್ಳಲು ನನ್ನ ಸಹಕಾರ ಎಲ್ಲಾ ರೀತಿಯಲ್ಲೂ ಇರುತ್ತದೆ. ನಾನು ನಿಮ್ಮೊಂದಿಗೆ ಇರುತ್ತೇನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರದಲ್ಲಿ ಆದಂತಹ ಹಲವಾರು ಜನಪರ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡಬೇಕು. ರೈತರಿಗೆ ಏನೆಲ್ಲಾ ಯೋಜನೆಗಳನ್ನು ರೂಪಿಸಿದ್ದರು ಎಂಬುವುದರ ಬಗ್ಗೆ ಮಾಹಿತಿ ನೀಡಬೇಕು. ನನ್ನ ಅವಧಿಯಲ್ಲಿ ಮಾಡುತ್ತಿರುವ ಹಾಗೂ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನೆಮನೆಗೆ ತಲುಪಿಸುವ ಕಾರ್ಯವನ್ನು ಈ ಭಾಗದ ಮುಖಂಡರು, ಕಾರ್ಯಕರ್ತರು ಮಾಡಬೇಕು. ಪಕ್ಷಕ್ಕೆ ಸೇರ್ಪಡೆಗೊಂಡ ಮುತ್ತಪ್ಪ ಹಾಗೂ ಸುಬ್ರಮಣ್ಯ ಅವರಿಗೆ ಅಭಿನಂದಿಸುತ್ತೇನೆ ಎಂದರು.

CHETAN KENDULI

ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಸುಣಘಟ್ಟ ಎಂಪಿಸಿಎಸ್ ಅಧ್ಯಕ್ಷ ಮುತ್ತಪ್ಪ, ಸುಬ್ರಮಣ್ಯ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದರಿಂದ ಅವರನ್ನು ಅಭಿನಂದಿಸಲಾಯಿತು.ಈ ವೇಳೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಅರದೇಶನಹಳ್ಳಿ ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಸೊಣ್ಣಪ್ಪ, ಕುಂದಾಣ ವಿಎಸ್‌ಎಸ್‌ಎನ್ ಅಧ್ಯಕ್ಷ ದಿನ್ನೂರು ರಾಮಣ್ಣ, ಮುಖಂಡರಾದ ದುದ್ದನಹಳ್ಳಿ ಮುನಿರಾಜು, ಆಲೂರು ಪಟಾಲಪ್ಪ, ಬೀರಸಂದ್ರ ಬೀರಪ್ಪ, ಕಾಮೇನಹಳ್ಳಿ ರಮೇಶ್, ಸಾದಹಳ್ಳಿ ಮಹೇಶ್, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಸಿ.ಕಾಂತ, ಸದಸ್ಯರಾದ ಭೈರೇಗೌಡ, ರಘು, ಹಾಗೂ ಊರಿನ ಮುಖಂಡರು ಇದ್ದರು. 

Be the first to comment

Leave a Reply

Your email address will not be published.


*