ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಸಾರ್ವಜನಿಕ ಸಭೆಯೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ನಗರದ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ ಕೂಡಾ ಹಮ್ಮಿಕೊಳ್ಳಲಾಗಿತ್ತು. ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನ ಏಕಾಏಕಿ ತರಾಟೆಗೆ ತಗೆದುಕೊಂಡರು. ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ವಿರುದ್ಧ ವಾಗ್ದಾಳಿ ನಡೆಸಿದ್ರು. ಡಿಸಿ ಅವರಿಗೆ ಸಮಜಾಯಿಷಿ ನೀಡಲೂ ಅವಕಾಶ ಕೊಡದೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಮಹಾನಗರ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಅವರನ್ನೂ ಸ್ಥಳಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದಾರೆ. ಇನ್ನು ಸಾರ್ವಜನಿಕ ಸಭೆಯಲ್ಲೇ ಕೇಂದ್ರ ಸಚಿವರಿಂದ ಬೈಗುಳಕ್ಕೊಳಗಾದ ಜಿಲ್ಲಾಧಿಕಾರಿ ದೀಪಾ ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಆದ್ರೆ ಇಷ್ಟೆಲ್ಲಾ ನಡೆದಿದ್ರೂ ಸಭೆಯಲ್ಲೇ ಕುಳಿತಿದ್ದ ಸಚಿವ ಜಗದೀಶ್ ಶೆಟ್ಟರ್ ಮಾತ್ರ ತುಟಿಬಿಚ್ಚಲಿಲ್ಲ.
Be the first to comment