ಜಿಲ್ಲಾ ಸುದ್ದಿಗಳು
ಬೆಳೆವಾರು ವಿಮೆ ವಿವರ
ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ವಿವಿಧ ಬೆಳೆವಾರು ವಿಮಾ ಕಂತು ತುಂಬಲು ವಿವರ ಇಂತಿದೆ. ಜೋಳ (ಮ.ಆ, ನೀರಾವರಿ), ಕುಸುಬೆ, ಅಗಸೆ, ಹುರಳಿ (ಮ.ಆ) ಬೆಳಗಳಿಗೆ ವಿಮೆ ಕಂತು ತುಂಬಲು ನವೆಂಬರ 15 ಕೊನೆಯ ದಿನವಾದರೆ, ಸೂರ್ಯಕ್ರಾಂತಿ (ಮ.ಆ, ನೀರಾವರಿ), ಗೋದಿ (ಮ.ಆ) ಬೆಳೆಗಳಿಗೆ ನವೆಂಬರ 30, ಗೋವಿನ ಜೋಳ (ನೀ), ಗೋದಿ, ಈರುಳ್ಳಿ (ನೀರಾವರಿ) ಬೆಳೆಗಳಿಗೆ ಡಿಸೆಂಬರ 16, ಕಡಲೆ (ಮ.ಆ, ನೀ) ಬೆಳೆಗೆ ಡಿಸೆಂಬರ 31 ಹಾಗೂ ಬೇಸಿಗೆ ಹಂಗಾಮಿಗೆ ಸೂರ್ಯಕ್ರಾಂತಿ, ಶೇಂಗಾಸ್ಥಳ) ಮತ್ತು ಈರುಳ್ಳಿ (ನೀ) ಬೆಳೆಗಳಿಗೆ ವಿಮೆ ಕಂತು ತುಂಬಲು ಫೆಬ್ರವರಿ 28, 2022 ಕೊನೆಯ ದಿನವಾಗಿದೆ.
ಬಾಗಲಕೋಟೆ : ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಮೆಗೆ ತಾಲೂಕಾವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಿಳಿಸಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕೆಎಸ್‍ವಾನ್ ಹಾಲ್‍ನಲ್ಲಿಂದು ವಿಮೆ ಯೋಜನೆ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಿಂಗಾರು ಮತ್ತು ಬೇಸಿಗೆ-2021ರಲ್ಲಿ ಅರ್ಹ ಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಇತರೆ ರೈತರಿಗೆ ಇದು ಐಚ್ಚಿಕವಾಗಿದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಚೆಪಡದೇ ಇದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ವಿಮೆ ಅಂತಿಮ ದಿನಾಂಕಕ್ಕಿಂತ 7 ದಿನ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಗೆ ಬಜಾಜ್ ಅಲಿಯಾಂಜ್ ಜಿ.ಆಯ್.ಸಿ ಇನ್ಸೂರೆನ್ಸ್ ಕಂಪನಿಯನ್ನು ವಿಮಾ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಘೋಷಿತವಾದ ಬೆಳೆಗಳಿಗೆ ನಿಗದಿತ ದಿನಾಂಕದ ಒಳಗಾಗಿ ಬೆಳೆ ವಿಮೆ ಕಂತು ತುಂಬಿ ವಿಮೆ ಮಾಡಿಸತಕ್ಕದ್ದು. ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳಮುಳುಗಡೆ, ಮೇಘಸ್ಪೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಆಗುವ ಬೆಂಕಿ ಅವಘಡಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಯವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯಡಿ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ (ಇನಂಡೇಶನ್), ಮೇಘಸ್ಪೋಟ ಮತ್ತು ಗುಡುಗು ಮಿಂಚುಗಳಿಂದ ಆಗುವ ಬೆಂಕಿ ಅವಗಡಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲು ಯೋಜನೆಯಡಿ ಅವಕಾಶ ನೀಡಲಾಗಿದೆ. ಇಂತಹ ಸ್ಥಳೀಯ ಗಂಡಾಂತರಗಳ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಥೆ ಅಥವಾ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಸೂಚನೆ ನೀಡತಕ್ಕದ್ದು.
ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು. ಈ ಯೋಜನೆಯಡಿ 2021 ರ ಹಿಂಗಾರು, ಬೇಸಿಗೆ ಹಂಗಾಮಿನÀಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದ್ದು, ಯೋಜನೆಯನ್ನು ಅಧಿಕಾರಿಗಳು ಸಮರ್ಪಕ ಅನುಷ್ಟಾನಗೊಳಿಸಲು ಕ್ರಮವಹಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಚಾರದ ಪೋಸ್ಟರ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಜಿಲ್ಲಾ ಅಂಕಿ ಸಂಖ್ಯೆ ಅಧಿಕಾರಿ ಗಂಗಾಧರ ದಿವಟರ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ತೋಟಗಾರಿಕೆ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ ಸೇರಿದಂತೆ ಕೃಷಿ ಇಲಾಖೆಯ ತಾಲೂಕಾ ಮಟ್ಟದ ಅಧಿಕಾರಿಗಳು, ವಿಮಾ ಕಂಪನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
Be the first to comment