ರಾಜ್ಯ ಸುದ್ದಿಗಳು
ಬೆಂಗಳೂರು
ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ನಡೆಸುತ್ತಿದ್ದು, ಸಚಿವ ಸುನೀಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸುನೀಲ್ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ವಿಧಾನಸೌಧದ ಸರ್ಕಾರಿ ನೌಕರರು ಗೀತ ಗಾಯನ ಮಾಡಿದ್ದು, ಕನ್ನಡಕ್ಕಾಗಿ ನಾವು ಅಭಿಯಾನದಡಿ ಲಕ್ಷ ಲಕ್ಷ ಕಂಠಗಳಲ್ಲಿ ಗೀತಗಾಯನ ಹಮ್ಮಿಕೊಳ್ಳಲಾಗಿದೆ. ನಾಡಗೀತೆ ಮತ್ತು ಮೂರು ಗೀತೆಗಳನ್ನು ಹಾಡಲಾಗಿದೆ.
ರಾಜ್ಯಾದಾದ್ಯಂತ ಬೆಳಗ್ಗೆ 11 ಗಂಟೆಗೆ ಒಂದು ಲಕ್ಷ ಕಂಠಗಳಲ್ಲಿ “ಬಾರಿಸು ಕನ್ನಡ ಡಿಂಡಿಮವ” ,‘ಜೋಗದ ಸಿರಿ ಬೆಳಕಿನಲ್ಲಿ’, “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಸೇರಿ ಮೂರು ಗೀತೆಗಳ ಗಾಯನವನ್ನ ಹಾಡಲಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಜಿಲ್ಲೆ, ತಾಲೂಕು, ಗ್ರಾಮಮಟ್ಟದಲ್ಲಿ ಗಡಿನಾಡು, ಹೊರನಾಡುಗಳಲ್ಲಿ ಏಕಕಾಲದಲ್ಲಿ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಬಿಎಂಪಿ ಮುಂಭಾಗದಲ್ಲಿ ಈ ಗಾಯನ ಕಾರ್ಯಕ್ರಮ ನಡೆದಿದೆ.
ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಗೀತಗಾಯನ ಕಾರ್ಯಕ್ರಮವನ್ನು ನಡೆದಿದ್ದು, ಬೆಳಗಾವಿಯ ಸುವರ್ಣಸೌಧದ ಮುಂಭಾಗ 1500 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್, ನಿರ್ಮಾಪಕ ಸುರೇಶ್, ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.
Be the first to comment