ಜಿಲ್ಲಾ ಸುದ್ದಿಗಳು
ಕುಮಟಾ
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜನರ ಒಳಿತಿಗಾಗಿ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ.ಕುಮಟಾ ಪಟ್ಟಣದಲ್ಲಿರುವ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ನಾವು ಸಿದ್ದಾಂತವನ್ನು ನಂಬಿ ಬಿಜೆಪಿಯಲ್ಲಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷದವರಿಗೆ ಯಾವುದೇ ಸಿದ್ದಾಂತವಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ಕೇಸರಿ ಕಂಡರೆ ಭಯ. ಅದಕ್ಕಾಗಿ ಠಾಣೆಯೊಂದರಲ್ಲಿ ಪೆÇಲೀಸರು ಕೇಸರಿ ಶಾಲು ಹಾಕಿದ್ದನ್ನು ಮುಂದಿಟ್ಟುಕೊಂಡು ಗದ್ದಲ ಎಬ್ಬಿಸಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಜಾತಿ ಮುಖ್ಯವೇ ಹೊರತು ಸಿದ್ದಾಂತವಲ್ಲ. ಹಾಗಾಗಿ ಅವರಿಗೆ ಚುನಾವಣೆ ಬಂದಾಗ ಜಾತಿ, ಕಂಬಳಿ ನೆನಪಾಗುತ್ತದೆ. ಓಟಿಗಾಗಿ ಏನು ಬೇಕಾದರು ಮಾಡುತ್ತಾರೆ ಎಂದು ವ್ಯಂಗವಾಡಿದ್ದಾರೆ.
ಬಿಜೆಪಿಯ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಮುಖಂಡರು ಅಪಪ್ರಚಾರದಲ್ಲಿ ತೊಡಗಿದ್ದರಿಂದ ಮುದೊಂದು ದಿನ ಕಾಂಗ್ರೆಸ್ ಪಕ್ಷವನ್ನು ಇಂಥಹ ವರ್ತನೆಯಿಂದಲೇ ಮುಂದೊಂದು ದಿನ ದೇಶದಲ್ಲಿ ಟಾರ್ಚ ಹಿಡಿದು ಹುಡುಕಬೇಕಾಗಬಹುದು ಎಂದು ಹಾಸ್ಯಾಸ್ಪದವಾಗಿ ತಿವಿದ ಅವರು, ನಮ್ಮ ಸರ್ಕಾರಗಳು ಜಾರಿಗೊಳಿಸಿರುವ ಯೋಜನೆಗಳನ್ನು ಜನರಿಗೆ ನಮ್ಮ ಪಕ್ಷದ ಕಾರ್ಯಕರ್ತರು ತಲುಪಿಸುವ ಜೊತೆಗೆ ಪ್ರಚಾರ ಮಾಡದಿದ್ದರೆ ಕಾಂಗ್ರೆಸ್ ಪಕ್ಷದವರು ಹೇಳುವ ಸುಳ್ಳನ್ನು ಜನರು ಸತ್ಯ ಎಂದು ನಂಬವರು. ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದರು.ಇನ್ನು ಇದೇ ವೇಳೆ ಶಾಸಕ ದಿನಕರ ಶೆಟ್ಟಿ ಮಾತನಾಡಿ, ನಮ್ಮ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂಬ ಹಣೆಪಟ್ಟಿಯಿಂದಾಗಿ ಸರ್ಕಾರದಿಂದ ಸಿಗಬೇಕಾದ ಅನೇಕ ಸವಲತ್ತುಗಳು ನಮಗೆ ಸಿಗುತ್ತಿಲ್ಲ. ಜಿಲ್ಲೆ ಹಾಗೂ ಪಕ್ಷದ ಹಿತ ದೃಷ್ಟಿಯಿಂದ ನಮ್ಮ ಜಿಲ್ಲೆಗೆ ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಯನ್ನ ಸರ್ಕಾರದಿಂದ ಕೊಡಿಸುವುದಕ್ಕೆ ಸಹಾಯ ಮಾಡಬೇಕು ಎಂದು ಗೃಹ ಸಚಿವರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಪಕ್ಷದ ಹಿರಿಯ ಮುಖಂಡ ವಿನೋದ ಪ್ರಭು, ಕುಮಟಾ ಬಿಜೆಪಿ ಮಂಡಲ ಅಧ್ಯಕ್ಷ ಹೇಮಂತ ಗಾಂವ್ಕರ, ಮಾಜಿ ಶಾಸಕ ಸುನೀಲ ಹೆಗಡೆ, ಪುರಸಭೆ ಅಧ್ಯಕ್ಷೆ ಮೋಹಿನಿ ಗೌಡ, ಪ್ರಮುಖರಾದ ಎಂ.ಜಿ ಭಟ್, ವಿನಾಯಕ ನಾಯ್ಕ ಬಗ್ಗೋಣ, ಜಿ.ಐ ಹೆಗಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment