ರಾಜ್ಯ ಸುದ್ದಿಗಳು
ಬೆಂಗಳೂರ
ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದು, ದೆಹಲಿಯಿಂದ ಏರ್ ಇಂಡಿಯಾ 502 ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4:15ಕ್ಕೆ ಅವರು ತಲುಪಲಿದ್ದಾರೆ.
ಏರ್ಪೋರ್ಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎನ್ನುವ ಮಾಹಿತಿ ಲಭಿಸಿದೆ. ಸದ್ಯ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ನಡೆಯುತ್ತಿದೆ.
ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಮೂಲಕ ಕಂಠೀರವ ಸ್ಟೇಡಿಯಂ, ಚಾಲುಕ್ಯ ಸರ್ಕಲ್, ಕಾವೇರಿ ಜಂಕ್ಷನ್, ಯಶವಂತಪುರ, ಗೊರಗುಂಟೆಪಾಳ್ಯ ಮಾರ್ಗವಾಗಿ ಪುನೀತ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಸಂಜೆ 5 ಗಂಟೆಯ ವೇಳೆಗೆ ಮೃತದೇಹ ಕಂಠೀರವ ಸ್ಟುಡಿಯೋಗೆ ಮತ್ತೆ ತಲುಪಲಿದೆ ಬಳಿಕ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ.
Be the first to comment