ಪುನೀತ್ ರಾಜಕುಮಾರ್ ನಿಧನಕ್ಕೆ ದೇವನಹಳ್ಳಿ ಸಾರ್ವಜನಿಕ ಸಂಪರ್ಕ ಕೇಂದ್ರ ವತಿಯಿಂದ ಸಂತಾಪ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ದೇವನಹಳ್ಳಿ ಸಾರ್ವಜನಿಕ ಸಂಪರ್ಕ ಕೇಂದ್ರದ ಅಧ್ಯಕ್ಷ ಸಹದೇಶ್ ತಿಳಿಸಿದರು.ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧಾನಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ವಿಧಿಯ ಕ್ರೂರ ಆಟ ಹೀಗಿರಬಾರದಾಗಿತ್ತು ಎಂದು ನೋವನ್ನು ತೋಡಿಕೊಂಡರು. 

CHETAN KENDULI

ತಾಪಂ ಮಾಜಿ ಸದಸ್ಯ ದಿನ್ನೂರು ವೆಂಕಟೇಶ್ ಮಾತನಾಡಿ, “ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕೃತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ.” ಎಂದರು.

ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಡಾ.ಸಿ.ಮುನಿಯಪ್ಪ ಮಾತನಾಡಿ, “ಅಕಾಲಿಕ ನಿಧನ ಹೊಂದಿದ ರಾಜ್ ಕುಮಾರ್ ಕುಟುಂಬದ ಕುಂಡಿಯಾಗಿದ್ದ ಪುನೀತ್ ರಾಜಕುಮಾರ್ ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.ಈ ವೇಳೆಯಲ್ಲಿ ತಾಪಂ ಸದಸ್ಯ ಸೋಮತ್ತನಹಳ್ಳಿ ಮಂಜುನಾಥ್, ಚಲನಚಿತ್ರ ನಿರ್ಮಾಪಕರಾದ ಮಂಡಿಬೆಲೆ ಮುನೇಗೌಡ, ನಟ ಜಿ.ಎಂ. ನಾಗರಾಜ್, ಜೈಭೀಮ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಶ್ರೀನಿವಾಸ್, ಕರವೇ ಸಂಘದ ಕಾರ್ಮಿಕ ಘಟಕದ ಅಧ್ಯಕ್ಷ ಎನ್.ಎಂ.ರಮೇಶ್, ರೈತ ಸಂಘದ ತಾಲೂಕು ಕಾರ್ಯದರ್ಶಿ ವಿಶ್ವನಾಥ್, ಸಾಹಿತಿ ಗುರುಸಿದ್ದಪ್ಪ ಇದ್ದರು.

Be the first to comment

Leave a Reply

Your email address will not be published.


*