ರಾಜ್ಯ ಸುದ್ದಿಗಳು
ದೇವನಹಳ್ಳಿ
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಆಟದ ಮೈದಾನದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ನೃತ್ಯ ಹಾಗೂ ಪೊಲೀಸ್ ಇಲಾಖೆಯಿಂದ ತಂಡೋಪತಂಡವಾಗಿ ಪತಸಂಚಲನ ನಡೆಸಿದ್ದು ಗಮನಸೆಳೆಯಿತು.
ಒ: ಇನ್ನೂ ಕಾರ್ಯಕ್ರಮದ ಭಾಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಗುರ್ತಿಸಿಕೊಂಡಿರುವ ಹಲವಾರು ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಜಿಲ್ಲೆಯ ೧೨೦೦ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು. ಅರ್ಹ ವಿಕಲಚೇತರಿಗೆ ದ್ವಿಚಕ್ರವಾಹನವನ್ನು ವಿತರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಪ್ರತಿಯೊಬ್ಬರಿಗೂ ಕನ್ನಡ ರಾಜ್ಯೋತ್ಸವ ದಿನದ ಶುಭಾಶಯಗಳನ್ನು ಮೊದಲಿಗೆ ಕೋರುತ್ತೇನೆ. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಕಳೆದ ಮೂರುವರ್ಷಗಳಲ್ಲಿ ಕೊಟ್ಟಿರುವಂತಹ ಎಲ್ಲಾ ಕಾರ್ಯಕ್ರಮಗಳು ಜಿಲ್ಲೆ ಮತ್ತು ರಾಜ್ಯದ ಜನರಿಗೆ ಸಂದೇಶ ನೀಡಲಾಗಿದೆ. ಕಾಡುಗೋಡಿ-ಹೊಸಕೋಟೆಯಿಂದದೇವನಹಳ್ಳಿಯವರೆಗೆ ಶಾಸಕರನ್ನು ಒಳಗೊಂಡಂತೆ ಮೆಟ್ರೋ ಮತ್ತು ಸಬರ್‍ಬನ್ ರೈಲ್ವೆ ವಿಸ್ತರಣೆಯಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಕೊಡಲಾಗಿದೆ. ಮನವಿ ಮೆರೆಗೆ ರಾಜ್ಯ ಸರಕಾರಕ್ಕೆ ಪತ್ರವನ್ನು ಸಹ ಕಳಹಿಸಿಕೊಟ್ಟಿದ್ದಾರೆ. ಬಹಳ ಮುಖ್ಯವಾಗಿ ಹೆಚ್ಚು ವೇಗವಾಗಿ ಅಭಿವೃದ್ಧಿಗೊಳ್ಳುತ್ತಿರುವ ಜಿಲ್ಲೆಯ ನಾಲ್ಕು ತಾಲೂಕುನಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕಾವಲಯಗಳುಅಭಿವೃದ್ಧಿಗೊಳ್ಳುತ್ತಿರುವುದರಿಂದ ಶೀಘ್ರ ರೈಲ್ವೆ ವಿಸ್ತರಣೆಯಾಗಲು ಮನವಿಯನ್ನು ಕೊಡಲಾಗಿದೆ ಎಂದು ಹೇಳಿದರು.
ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಶಕ್ತಿ ಮೀರಿ ಕೆಲಸ ಮಾಡಲಾಗುತ್ತಿದೆ. ಅಭಿವೃದ್ಧಿಗೊಳ್ಳುತ್ತಿರುವ ತಾಲೂಕಿನಲ್ಲಿ ಜಿಲ್ಲಾಡಳಿತ ಬಂದಿರುವುದರಿಂದ ಈ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕು ಎಂದು ಸರಕಾರದ ಮುಂದಿಡಲಾಗಿದೆ. ಸದನದಲ್ಲಿ ಈ ಬಗ್ಗೆ ಪ್ರಶ್ನಿಸಲಾಗುತ್ತದೆ. ದೇವನಹಳ್ಳಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಲು ಎಲ್ಲಾ ರೀತಿಯಲ್ಲಿ ಅನುದಾನ ತಂದು ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತುಕೊಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ಎನ್.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ವಿಜಯ, ಜಿಪಂ ಸಿಇಒ ಎಂ.ಆರ್.ರವಿಕುಮಾರ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ದೇವನಹಳ್ಳಿ ತಾಲೂಕು ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್, ಪುರಸಭಾಧ್ಯಕ್ಷೆ ರೇಖಾ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ನಾಗೇಶ್, ಕೆಯುಡಬ್ಲ್ಯೂಜೆಯ ಜಿಲ್ಲಾಧ್ಯಕ್ಷ ಮಂಡಿಬೆಲೆ ರಾಜಣ್ಣ, ಪೊಲೀಸ್ ವರಿಷ್ಠಾಧಿಕಾರಿ, ಮಾಜಿ ಶಾಸಕ ಜಿ.ಚಂದ್ರಣ್ಣ ಸೇರಿದಂತೆ ಹಲವಾರು ಉಪಸ್ಥಿತಿ ಇದ್ದರು.
Be the first to comment