ಜಿಲ್ಲಾ ಸುದ್ದಿಗಳು
ಕಾರವಾರ
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ ಅವರ ಆರೋಗ್ಯದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಇಂದು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ಭೆಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಸುಕ್ರಿ ಗೌಡ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿ ಸುಕ್ರಿ ಗೌಡ ಅವರು ಕಾರವಾರ ಕ್ರೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ವಿಚಾರ ತಿಳಿದ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದು, ಯಾವುದೆ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ವ್ಯೆದ್ಯರಿಗೆ ತಿಳಿಸಿದರು. ಶಿವರಾಮ್ ಹೆಬ್ಬಾರ್ ಜತೆ ಶಾಸಕಿ ರೂಪಾಲಿ ನಾಯ್ಕ್ ಕೂಡಾ ಸುಕ್ರಿ ಗೌಡ ಆರೋಗ್ಯ ವಿಚಾರಿಸಿದರು..
Be the first to comment