ರಾಜ್ಯ ಸುದ್ದಿಗಳು
ದೇವನಹಳ್ಳಿ
ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಸಭಾಂಗಣದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ನವೆಂಬರ್ 7ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಿ ಜೆಡಿಎಸ್ ಭವನದ ಎರಡನೇ ಮಹಡಿ ಮತ್ತು ವಿಕಾಸ ಭವನದ ಮೊದಲನೇ ಮಹಡಿ ಉದ್ಘಾಟನಾ ಕಾರ್ಯಕ್ರಮದ ಸುದ್ದಿಗೋಷ್ಠಿ ನಡೆಸಲಾಯಿತು.
ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ನವೆಂಬರ್ ೭, ಭಾನುವಾರ ಬೆಳಿಗ್ಗೆ 10.30ಕ್ಕೆ ದೇವನಹಳ್ಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರು ಆಗಮಿಸಿ ಪಟ್ಟಣದ ಪ್ರಶಾಂತನಗರದಲ್ಲಿರುವ ಜೆಡಿಎಸ್ ಭವನದ ಎರಡನೇ ಮಹಡಿಯನ್ನು ಮತ್ತು ಪಿಎಲ್‌ಡಿ ಬ್ಯಾಂಕಿನ ವಿಕಾಸ ಭವನ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮವನ್ನು ಹಳೇಬಸ್ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೋಳ್ಳಲಿದ್ದಾರೆ. ಸುಮಾರು 10ಸಾವಿರಕ್ಕೂ ಹೆಚ್ಚಿನ ಜನ ಸೇರುವುದರ ಮೂಲಕ ಕಾರ್ಯಕ್ರಮ ನಡೆಯಲಿದೆ ಈಗಾಗಲೇ ಕರಪತ್ರದ ಮೂಲಕ ಪ್ರತಿ ಗ್ರಾಮಮಟ್ಟದಲ್ಲಿ ಹೆಚ್ಚಿನ ಜನ ಸೇರುವಂತೆ ಆಹ್ವಾನಿಸಲಾಗಿದೆ ಎಂದು ಹೇಳಿದರು.
ಜೆಡಿಎಸ್ ಅಡಾಖ್ ಸಮಿತಿಯ ತಾಲೂಕು ಅಧ್ಯಕ್ಷ ಆರ್.ಮುನೇಗೌಡ ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ಎಲ್ಲಾ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಪುರಸಭೆ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಸಹಕಾರ ಸಂಘಗಳ ಹಾಲಿ, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕರಪತ್ರಗಳನ್ನು ಹಂಚಿ ಆಹ್ವಾನಿಸಲಾಗಿದೆ. ಸಕಾಲದಲ್ಲಿ ಎಲ್ಲಾ ಘಟಕದ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು. ಸುದ್ಧಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಕೀಲ ಮುನಿರಾಜು, ಮಾತನಾಡಿದರು.
ಈ ವೇಳೆಯಲ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ತಾಲೂಕು ಮುಖಂಡರಾದ ಆರ್.ಕೆ.ನಂಜೇಗೌಡ, ಮುನಿರಾಜ್, ಪ್ರಭಾಕರ್, ಜಗದೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ನಾರಾಯಣಸ್ವಾಮಿ, ಕುಂದಾಣ ಹೋಬಳಿ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಮಂಡಿಬೆಲೆ ರಾಜಣ್ಣ, ಮುಖಂಡ ನೆರಗನಹಳ್ಳಿ ಶ್ರೀನಿವಾಸ್, ಯುವ ಘಟಕದ ಭರತ್, ಜೆಡಿಎಸ್ ಪಕ್ಷದ ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಇದ್ದರು.
Be the first to comment