ರಾಜ್ಯ ಸುದ್ದಿಗಳು
ದೇವನಹಳ್ಳಿ
ತಾಲೂಕಿನ ಜಾಲಿಗೆ ಗ್ರಾಪಂ ವ್ಯಾಪ್ತಿಯ ಮಾರಗೊಂಡನಹಳ್ಳಿ ಸರ್ವೆ ನಂ.21ರಲ್ಲಿ ಸ್ಮಶಾನ ಜಾಗ ಇಲ್ಲ. ಈ ಬಗ್ಗೆ ಮಾಹಿತಿ ನೀಡಿದರೂ ಯಾವೊಬ್ಬ ಅಧಿಕಾರಿಯೂ ಸ್ಪಂಧಿಸುತ್ತಿಲ್ಲ ಎಂದು ಜಾಲಿಗೆ ಗ್ರಾಪಂ ಸದಸ್ಯ ಆನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಮಶಾನದ ಜಾಗ ಗುರ್ತಿಸಿಕೊಡುವಂತೆ ಈಗಾಗಲೇ ಸಂಬಂಧಪಟ್ಟ ತಹಶೀಲ್ದಾರ್, ಸರ್ವೆ ಅಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇನ್ನಾದರೂ ಸ್ಮಶಾನ ಜಾಗವನ್ನು ಮಾರಗೊಂಡನಹಳ್ಳಿ ಗ್ರಾಮದ ಸರ್ವೆ ನಂ.21ಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಸ್ಮಶಾನ ಜಾಗ ಗುರ್ತಿಸಿಕೊಡಬೇಕು ಎಂದು ಒತ್ತಾಯಿಸಿದರು.
Be the first to comment