ರಾಜ್ಯ ಸುದ್ದಿಗಳು
ಸಿದ್ದಾಪುರ
ಪುನೀತ್ ರಾಜಕುಮಾರ್ ಆಶ್ರಯಧಾಮದಲ್ಲಿ ಕಳೆದ ಎರಡು ವರ್ಷಗಳಿಂದ ಆಶ್ರಯ ಪಡೆದಿದ್ದ ಕೃಷ್ಣ(ಅವರ ಹೆಸರು ತಿಳಿದಿಲ್ಲಾ ನಾವು ಇಟ್ಟ ಹೆಸರು) ಎನ್ನುವ ವ್ಯಕ್ತಿ ಸಿದ್ದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ 6.30 ರ ಸುಮಾರಿಗೆ ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಶಿರಸಿ ನಗರದ ಜ್ಯೂ ಸರ್ಕಲ್ ನಲ್ಲಿ ಜನರು ಕುಡಿದು ಬಿಸಾಡಿದ ತೆಂಗಿನ ಚಿಪ್ಪನ್ನು ತಿಂದು ಹಸಿವು ನೀಗಿಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆಶ್ರಮಕ್ಕೆ ಕರೆತಂದು ಔಷಧೋಪಚಾರ ನೀಡಿ ಆರೈಕೆ ಮಾಡಲಾಗುತ್ತಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಇವರಿಗೆ ಕಳೆದ ಎರಡು ವರ್ಷಗಳಲ್ಲಿ 3 – 4 ಬಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ದಿನಾಂಕ 03-11-2021ರಂದು ಮತ್ತೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಇವರನ್ನು ಸಿದ್ದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ನಿನ್ನೆ ಸಂಜೆ ಈ ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ 10ಗಂಟೆಗೆ ಶಿರಸಿಯ ವಿದ್ಯಾನಗರ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆಯನ್ನು ನಡೆಸಲಾಯಿತು. ಅಂತ್ಯಕ್ರಿಯೆ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕೃಷ್ಣ ಬಳೆಗಾರ ಹಾಗೂ ಸ್ನೇಹಿತರಾದ ದಾವಣಗೆರೆಯ ಅರವಿಂದ ಕರ್ಣಂ ರವರು ಸಹಕರಿಸಿದರು.
Be the first to comment