ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಮುಖ್ಯಮಂತ್ರಿ ರೈತ ವಿಧ್ಯಾ ನಿಧಿ ಎಂಬ ಹೊಸ ಶಿಷ್ಯವೇತನ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ.
10 ನೇ ತರಗತಿಯನ್ನು ಪೂರ್ಣಗೊಳಿಸಿ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶವನ್ನು ಪಡೆದಿರುವ ಪಿಯುಸಿ, ಪದವಿ, ಸ್ನಾತಕೋತ್ತರ ಕೊರ್ಸಗಳಿಗೆ ಪ್ರವೇಶ ಪಡೆದ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಪದ್ಧತಿಯ ಮೂಲಕ ಪ್ರಸಕ್ತ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ 2,500 ರೂ.ಗಳಿಂದ 11,000 ರೂ.ಗಳ ವರೆಗೆ ಶಿಷ್ಯ ವೇತನದ ಮೊತ್ತವನ್ನು ವಾರ್ಷಿಕ ಶಿಷ್ಯ ವೇತನ ರೂಪದಲ್ಲಿ ಒದಗಿಸುವ ಯೋಜನೆ ಇದಾಗಿದೆ.
ಎಲ್ಲಾ ರೈತ ಮಕ್ಕಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ(https://ssp.postmatric.karnataka.gov.in/) ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದ ಶಿಷ್ಯವೇತನಕ್ಕಾಗಿ ನೊಂದಾಯಿಸಿ ಕೊಳ್ಳುವಂತೆ ಮತ್ತು ಹೆಚ್ಚಿನ ಮಾಹಿತಿ ಪಡೆಯಲು ರೈತ ಸಹಾಯವಾಣಿ 1800 425 3553 ಗೆ ಉಚಿತ ಕರೆ ಮಾಡಲು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment