ಅಘನಾಶಿನಿ ನದಿಯಲ್ಲಿ ಚಿಪ್ಪು ಗಣಿಗಾರಿಕೆ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ…

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಕುಮಟಾ

ತಾಲೂಕಿನ ವಿವಿಧ ಭಾಗದ ಜನರು ಅಘನಾಶಿನಿ ನದಿಯಲ್ಲಿ ಚಿಪ್ಪು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ ಒತ್ತಾಯಿಸಿದ್ದಾರೆ. ಕುಮಟಾ ಹಾಗೂ ಅಘನಾಶಿನಿ ನದಿ ಪ್ರದೇಶದ ಜನರು ಕಾರವಾರದ ಜಿಲ್ಲಾಧಿಕಾರಿಗಳ ಕಛೇರಿಗೆ ಬಂದು ಮುಲ್ಲೈ ಮುಹಿಲನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಅಘನಾಶಿನಿ ನದಿಯಲ್ಲಿ ನಿರಂತರವಾಗಿ ಚಿಪ್ಪು ಗಣಿಗಾರಿಕೆ ನಡೆಸುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ.

CHETAN KENDULI

ಮೀನುಗಾರರಿಗೆ ಕೆಟ್ಟ ಪದಗಳಿಂದ ಚಿಪ್ಪು ಗಣಿಗಾರಿಕೆ ನಡೆಸುವ ಜನರು ಬೈದು ಧಮಕಿ ಹಾಕುತ್ತಿದ್ದಾರೆ. ಇದರಿಂದ ಮೀನುಗಾರರು ಸಂಕಷ್ಟ ಅನುಭವಿಸುವಂತಾಗಿದೆ. ಈ ಕುರಿತು ಕುಮಟಾ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೆ ಹೆದರಿಸುವುದು ಹೊಡೆಯುವುದು ಮಾಡುತ್ತಿದ್ದಾರೆ. ಎಂದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*