ರಾಜ್ಯ ಸುದ್ದಿಗಳು
ಅಂಕೋಲ
ತಾಲೂಕಿನ ಹೊನ್ನಳ್ಳಿಯ ಹಾಲಕ್ಕಿ ಮಹಿಳೆ ತುಳಸಿ ಗೌಡ ಅವರು ನವೆಂಬರ 8 ರ ಸೋಮವಾರ ದೆಹಲಿಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಷ್ಟ್ರದ 4 ನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ನೂರಾರು ಎಕರೆ ಅರಣ್ಯ ಭೂಮಿಯಲ್ಲಿ ಗಿಡಗಳನ್ನು ಬೆಳೆಸಿ ಉಳಿಸುವ ಮೂಲಕ ಪರಿಸರ ಸಂರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತುಳಸಿ ಗೌಡ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿ , ಅವರ ಪರಿಸರ ಸಂರಕ್ಷಣಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಕೋಲಾ ತಾಲೂಕಿಗೆ ಮೊದಲ ಪದ್ಮಶ್ರೀ ಪ್ರಶಸ್ತಿ ತಂದ ಜಾನಪದ ಹಾಡುಗಾರ್ತಿ ಸುಕ್ರಿ ಬೊಮ್ಮಾ ಗೌಡ ಅವರ ಆಶೀರ್ವಾದ ಪಡೆದು ಪದ್ಮಶ್ರೀ ಪ್ರಶಸ್ತಿ ಪಡೆಯಲು ತುಳಸಿ ಗೌಡ ಅವರು ಹೊನ್ನಳ್ಳಿಯಿಂದ ದೆಹಲಿ ಪ್ರಯಾಣ ಬೆಳೆಸಿದ್ದರು.
ಸರಳ ನಡೆ-ನುಡಿ, ಹಾಲಕ್ಕಿಗಳ ಸಾಂಪ್ರದಾಯಿಕ ಉಡುಗೆ ತೊಟ್ಟು, ಹಳ್ಳಿಯಿಂದ ದಿಲ್ಲಿಗೆ ಬರಿಗಾಲಲ್ಲೇ ತೆರಳಿದ್ದು, ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿಯೂ ಅವರು ತೋರಿದ ವಿನೀತ ಭಾವ ಗಮನಿಸಬಹುದಾಗಿದೆ.ತುಳಸಿ ಗೌಡ ಅವರ ಪ್ರಶಸ್ತಿಯಿಂದಾಗಿ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿಗಳಿಗಷ್ಟೇ ಅಲ್ಲದೇ, ಅಂಕೋಲಾ ತಾಲೂಕಿಗೆ, ಉತ್ತರ ಕನ್ನಡ ಜಿಲ್ಲೆಗೆ, ನಮ್ಮ ರಾಜ್ಯ ಹಾಗೂ ದೇಶಕ್ಕೆ ಹೆಮ್ಮೆಯ ಗರಿ ಮೂಡಿದಂತಾಗಿದೆ.ಪ್ರಧಾನಮಂತ್ರಿ ಸೇರಿದಂತೆ ದೇಶದ ನಾನಾ ಗಣ್ಯರು, ತುಳಿಸಿ ಗೌಡ ಕುಟುಂಬವರ್ಗದವರು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.
Be the first to comment