ಹುರುಳಿಸಾಲ್ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ಉದ್ಘಾಟಿಸಿದ ಶಾಸಕ ಸುನೀಲ್ ನಾಯ್ಕ

ವರದಿ - ಜೀವೋತ್ತಮ ಪೈ

ಜಿಲ್ಲಾ ಸುದ್ದಿಯನ್ನು 

ಭಟ್ಕಳ

ಭಟ್ಕಳ ಹುರುಳಿಸಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲಮಾಧ್ಯಮ ತರಗತಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ, ಶಾಸಕ ಸುನಿಲ್ ನಾಯ್ಕ ರಿಂದ ಉದ್ಗಾಟನೆ ಮಾಡಿದರುಉದ್ಘಾಟನೆ ನೇರವೇರಿಸಿ ಮಾತನಾಡಿದ ಅವರು ಸರಕಾರ ಶಿಕ್ಷಣಕ್ಕೆ ಹೆಚ್ಚು ಒತ್ತುಕೊಡುತ್ತಿದ್ದು ನಾನೂ ಕೂಡಾ ನನ್ನ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ. ಯಾವುದೇ ಮಗುವೂ ಕೂಡಾ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವುದು ನನ್ನ ಉದ್ದೇಶ ಆಗಿದ್ದು ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಸರಕಾರಿ ಶಾಲೆಗಳಲ್ಲಿಯ ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ ಅವರು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸರಕಾರಿ ಶಾಲೆಗಳು ಸಾಕ್ಷಿಯಾಗಿವೆ ಎಂದೂ ಹೇಳಿದರು.

CHETAN KENDULI

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಸೀಲ್ದಾರ್ ಎಸ್. ರವಿಚಂದ್ರ ಅವರು ಶಿಕ್ಷಣ ಕ್ಷೇತ್ರದಲ್ಲಿ ನಾವು ಪ್ರಗತಿಯನ್ನ ಸಾದಿಸುತ್ತಿದ್ದು ಸರಕಾರಿ ಶಾಲೆಗಳಲ್ಲಿಯೂ ಇಂದು ಗುಣಮಟ್ಟದ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವಲ್ಲಿ ಸರಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿ.ಆರ್.ಸಿ. ಯಲ್ಲಮ್ಮ, ಜಾಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಮಚಂದ್ರ ವರ್ಣೇಕರ್, ದೈಹಿಕ ಶಿಕ್ಷಣ ಪರಿವೀಕ್ಷ ಚಂದ್ರಶೇಖರ ಶೆಟ್ಟಿ ಮಾತನಾಡಿದರು.ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀಧರ ನಾಯ್ಕ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯ ಎಸ್. ಟಿ. ಗೊಂಡ ಸ್ವಾಗತಿಸಿದರು. ಕೋಣಾರ ಭಾಗದ ಸಿ.ಆರ್.ಪಿ. ಸುರೇಶ ಮುರ್ಡೇಶ್ವರ ನಿರೂಪಿಸಿದರು. ಸಹ ಶಿಕ್ಷಕಿ ಭಾರತಿ ನಾಯ್ಕ ವಂದಿಸಿದರು.

Be the first to comment

Leave a Reply

Your email address will not be published.


*