ರಾಜ್ಯ ಸುದ್ದಿಗಳು
ಕಾರವಾರ
ಮುಂಬೈ-ಕರ್ನಾಟಕ (ಮುಂಬೈ ಕರ್ನಾಟಕ ) ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಬೆಳಗಾವಿ , ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳನ್ನು ಸೇರಿಸಿ ಕಿತ್ತೂರು ಕರ್ನಾಟಕ ಪ್ರದೇಶವಾಗಿ ಬದಲಾಗಲಿದೆ.
ಹೈದರಾಬಾದ್-ಕರ್ನಾಟಕ ಪ್ರಾಂತ್ಯವನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಳಿಕ ಮುಂಬೈ-ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂದು ಆ ಭಾಗದ ಜನರು ಒತ್ತಾಯಿಸಿದ್ದರು.
ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವ ಬಗ್ಗೆ ಆಶ್ವಾಸನೆ ನೀಡಿದ್ದರು. ಇತ್ತೀಚೆಗೆ ಕಿತ್ತೂರು ಉತ್ಸವದಲ್ಲಿ ಹಾಗೂ ಉಪಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಮುಂಬೈ ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡುವುದಾಗಿ ಭರವಸೆ ನೀಡಿದ್ದರು. ಅಂತೆಯೇ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ.
Be the first to comment