ರಾಜ್ಯ ಸುದ್ದಿಗಳು
ಸಿದ್ದಾಪುರ
ನೈತಿಕ ಪೊಲೀಸ್ ಗಿರಿ ವಿರೋದಿಸಿ ಮತ್ತು ದೇಶದಲ್ಲಿ ಶಾಂತಿ ನೆಲೆಸಬೇಕು ಅನ್ನುವ ಕಾರಣಕ್ಕಾಗಿ ಸಮಾಜವಾದಿ ಪಾರ್ಟಿಯಿಂದ ಸಿದ್ದಾಪುರದಲ್ಲಿ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಯಶಸ್ವಿಗೊಂಡಿದೆ. ಇಂದು ಬೆಳಗ್ಗೆ ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ನಾಗರಾಜ ನಾಯ್ಕ ರವರ ನೇತೃತ್ವದಲ್ಲಿ ಸಿದ್ದಾಪುರ ಪೊಲೀಸ್ ಠಾಣೆ ಎದುರು ಉಪವಾಸ ಸತ್ಯಾಗ್ರಹ ಪ್ರಾರಂಬಿಸಲಾಯಿತು. ಪೋಲಿಸ್ ಠಾಣೆಯ ಎದುರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಪೋಲಿಸ್ ಇನ್ಸಪೆಕ್ಟರ್ ರವರು ಅನುಮತಿ ನೀಡದ ಹಿನ್ನೆಲೆಯಲ್ಲಿ ಮಿನಿ ವಿಧಾನ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಈ ಸಂದರ್ಭದಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಸಮಾಜವಾದಿ ಪಾರ್ಟಿಯಿಂದ ಸಿದ್ದಾಪುರ ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಬೇಡಿಕೆ ಪತ್ರ ನೀಡಲಾಯಿತು. ಮುಖ್ಯಮಂತ್ರಿಗಳು ನೈತಿಕ ಪೊಲೀಸ್ ಗಿರಿ ಸಮರ್ಥಿಸಿದ ಹೇಳಿಕೆ ಪಡೆಯಬೇಕು. ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪ ದನದ ವ್ಯಾಪಾರಿಯಾದ ಗೋವಿಂದ ಗೌಡರವರ ಮೇಲಿನ ಹಲ್ಲೆ ಪ್ರಕರಣದ ತನಿಖೆ ಸಮಂಜಸವಾಗಿ ಇರದ ಕಾರಣ ಉನ್ನತ ಮಟ್ಟದ ಅಧಿಕಾರಿಗಳಿಂದ ವಿಚಾರಣೆಗೊಳಪಡಿಸಬೇಕು. ಭವಿಷ್ಯದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯದಂತೆ ಕ್ರಮದ ಭರವಸೆ ನೀಡಬೇಕು ಎಂದು ಬೇಡಿಕೆ ಸಲ್ಲಿಸಲಾಗಿದೆ.
ದೇಶದಲ್ಲಿ ಶಾಂತಿ ನೆಲೆಸುವುದಕ್ಕಾಗಿ ಇಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡ ಸಂದರ್ಭದಲ್ಲಿ ಈ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜವಾದಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷರಾದ ನಾಗರಾಜ ನಾಯ್ಕ, ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ನಾಯ್ಕ, ಉತ್ತರಕನ್ನಡ ಜಿಲ್ಲಾಧ್ಯಕ್ಷ ಕೃಷ್ಣ ಎಚ್ ಬಳೆಗಾರ ಕಾರ್ಮಿಕ ವಿಭಾಗದ ಉತ್ತರಕನ್ನಡ ಜಿಲ್ಲಾ ಅಧ್ಯಕ್ಷ ಲಕ್ಷ್ಮೀಶ್ ನಾಯ್ಕ, ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಕುಮಾರ್ ನಾಯ್ಕ, ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದರ್ಶನ್ ನಾಯ್ಕ, ಹಾಗೂ ಹಲ್ಲೆಗೊಳಗಾದ ದನದ ವ್ಯಾಪಾರಿ ಗೋವಿಂದಗೌಡ ಹಾಗೂ ಆತನ ಕುಟುಂಬದವರು ಉಪಸ್ಥಿತರಿದ್ದರು.
Be the first to comment