ಕಾನೂನು ಅರಿವು ಮೂಲಕ ಮಹಿಳಾ ಸಬಲೀಕರಣ ಶಿಬಿರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ರಾಷ್ಟ್ರೀಯಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟ್ರೀಯ ಮಹಿಳಾ ಆಯೊಗ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡ ಕಾನೂನು ಅರಿವು ಮೂಲಕ ಮಹಿಳಾ ಸಬಲೀಕರಣ ಶಿಬಿರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದೇಶಪಾಂಡೆ ಜಿ.ಎಸ್ ಅವರು ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಮಾತನಾಡಿ ಪುರುಷ ಪ್ರಧಾನವಾದ ಈ ದೇಶದಲ್ಲಿ ಮಹಿಳೆಯರು ಮುಂದೆ ಬರಬೇಕಾದರೆ ಶಿಕ್ಷಣ ಮತ್ತು ಕಾನೂನು ಅರಿವು ಪಡೆಯುವುದು ಅಗತ್ಯವಾಗಿದೆ ಎಂದರು.

ಸಮಾಜದಲ್ಲಿ ದುರ್ಬಲ ಹಾಗೂ ಬಡ ಜನಾಂಗಕ್ಕೆ ಮತ್ತು ವಾರ್ಷಿಕ 3 ಲಕ್ಷ ಆದಾಯಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ, ಕಾರ್ಮಿಕ ಹೀಗೆ ಎಲ್ಲಾ ವರ್ಗದ ಜನಾಂಗದವರಿಗೆ ಪ್ರತಿ ಮನೆ ಮನೆಗೆ ತೆರಳಿ ಉಚಿತ ಕಾನೂನು ನೆರವು ತರಬೇತಿ ನೀಡಲಾಗುತ್ತಿದೆ. ಆ ದೃಷ್ಠಿಯಿಂದ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ಕಾನೂನ ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಪ್ರತಿ ಹಳ್ಳಿಗೂ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ಗ್ರಾಮಗಳಲ್ಲಿ ಶಿಕ್ಷಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನ್ಯಾಯವಾದಿಗಳು ಹಾಗೂ ನ್ಯಾಯಾದೀಷರು ಕೂಡ ಈ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಸಕ್ರಿಯಾಗಿ ಪಾಲ್ಗೊಂಡಿದ್ದಾರೆ ಎಂದರು.

ರಾಷ್ಟ್ರೀಯ ಮಹಿಳಾ ಆಯೊಗದೊಂದಿಗೆ ಕೂಡ ಎರಡು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಬಾಗಲಕೋಟೆ ಹಾಗೂ ಮುಧೋಳದಲ್ಲಿ ತಲಾ ಒಂದು ಕಾರ್ಯಕ್ರಮ ಜರುಗಲಿದೆ ಎಂದರು. ಈ ಕಾನೂನು ಅರಿವು ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಹಕಾರ ದೊರೆತ್ತಿದ್ದು, ಪ್ರತಿ ಹಳ್ಳಿಗಳ ಮನೆ ಮನೆಗೆ ತೆರಳಿ ಉಚಿತ ಕಾನೂನು ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಯತ್ ಉಪಕಾರ್ಯದಶಿ ಅಮರೇಶ ನಾಯಕ ಮಾತನಾಡಿ ಮುಖ್ಯವಾಗಿ ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಮುಂದೆ ಬರಬೇಕಾದರೆ, ಮೊದಲು ಕಡ್ಡಾಯವಾಗಿ ಶಿಕ್ಷಣವಂತರಗಬೇಕು ಎಂದರು. ಎಲ್ಲಿಯವರೆಗೆ ಮಹಿಳೆ ಸುಶಿಕ್ಷಿತರಾಗುವುದಿಲ್ಲವೋ ಅಲ್ಲಿಯವರೆಗೆ ಮಹಿಳೆ ಸಬಲೆಯಾಗಲು ಸಾಧ್ಯವಿಲ್ಲವೆಂದರು.

ವಕೀಲರ ಸಂಘದ ಅಧ್ಯಕ್ಷ ವ್ಹಿ.ಬಿ.ಚೌಕಿಮಠ ಮತ್ತು ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಜಾಶ್ಮಿನ್ ಕಿಲ್ಲೆದಾರ್ ಮತನಾಡಿದ ಅವರು ಸರ್ಕಾರ ಇಗಾಗಲೇ ಶೇ.50 ರಷ್ಟು ಸ್ಥನಮಾನವನ್ನು ಮಹಿಳೆಯರಿಗೆ ಮೀಸಲಿಟ್ಟಿದ್ದರೂ ವಿವಿಧ ಕ್ಷೇತ್ರಗಳಲ್ಲಿ ಆಯ್ಕೆಯಾಗಿರುವ ಮಹಿಳೆಯರ ಪರವಾಗಿ ಅವರ ಪತಿ ಹಾಗೂ ಪುತ್ರರು ಅಧಿಕಾರ ಚಲಾಯಿಸುತ್ತಿರುವುದು ಇಪರ್ಯಾಸ. ಇಂತಹ ಸಂಕೋಲೆಯಿಂದ ಹೊರ ಬರಬೇಕಾದರೆ ಶಿಕ್ಷಣವಂತರಾಗಿ ಕಾನೂನು ಅರಿವು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಾಣಕಾರ, ಸಂಪನ್ಮೂಲ ವ್ಯಕ್ತಗಳಾದ ವಕೀಲರಾದ ಸೋನಿಯ ಪರಾಂಡೆ, ಅರೂಣ ರಘುವೀರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*