ರಾಜ್ಯ ಸುದ್ದಿಗಳು
ದೇವನಹಳ್ಳಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದಮೇಲೆ ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಕೆಲವು ಬದಲಾವಣೆಗಳನ್ನು ಸಹ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಬದಲಾವಣೆಯಾಗುವುದಿಲ್ಲ. ಉತ್ತಮವಾಗಿ ಮುಖ್ಯಮಂತ್ರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗುವ ಮುನ್ನ ಸುದ್ದಿಗಾರರೊಂದಿಗೆ ಹಾಗೂ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳೊಂದಿಗೆ ಮಾತನಾಡಿದರು. ಬಿಟ್ ಕಾಯಿನ್ ಅಂದರೆ ಏನು ಎಂದು ಜನರಿಗೆ ತಿಳಿದಿಲ್ಲ. ಶೇ.95ರಷ್ಟು ಜನರಿಗೆ ಬಿಟ್ ಕಾಯಿನ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಜನ ಏನು ಎಂದು ಕೇಳುತ್ತಾರೆ. ರಾಜಕೀಯಕ್ಕಾಗಿ ಏನೆಲ್ಲಾ ಮಾತನಾಡುತ್ತಾರೆ ಎಂಬುದು ತಿಳಿಯುತ್ತಿದೆ. ಬಹಳಷ್ಟು ದಿನಗಳಿಂದ ಶೋಷಿತ ವರ್ಗಗಳು, ಶೋಷಿತ ಸಮಾಜ, ಶೋಷಣೆಗೆ ಒಳಗಾದವರ ಬಗ್ಗೆ ರಾಜಕಾರಣಿಗಳು ಚರ್ಚೆ ಮಾಡುವುದಿಲ್ಲ. ಸ್ವಾತಂತ್ರ್ಯ ಬಂದು 75ವರ್ಷಗಳಾದರೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ, ವಸತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನುಇ ಎದುರಿಸುತ್ತಿದ್ದಾರೆ.
ಬಡವರು ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದಾರೆ. ಇಂತಹವರ ಸಮಸ್ಯೆಗಳನ್ನು ಚರ್ಚಿಸುವುದರ ಬದಲು ಬಿಟ್ ಕಾಯಿನ್ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾಪಿಸುತ್ತಾರೆ. ಜನರ ಸಮಸ್ಯೆಗಳನ್ನು ಚರ್ಚಿಸುವಂತೆ ಆಗಬೇಕು ಎಂದು ಹೇಳಿದರು.ಎಂದು ಹೇಳಿದರು.
ಈ ವೇಳೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್, ತಾಲೂಕು ದಲಿತ ಸಂಘರ್ಷ ಸಮಿತಿ ಪ್ರಧಾನ ಸಂಚಾಲಕ ಅತ್ತಿಬೆಲೆ ನರಸಪ್ಪ, ವಿಜಯಪುರ ಪುರಸಭಾ ಸದಸ್ಯ ನಾರಾಯಣಸ್ವಾಮಿ, ಜಿಲ್ಲಾ ಸಂಚಾಲಕ ಬೀಸನಹಳ್ಳಿ ಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಆವತಿ ತಿಮ್ಮರಾಯಪ್ಪ, ಬೂದಿಗೆರೆ ಸುಬ್ರಮಣಿ, ಮುನಿಕೃಷ್ಣ ಜೋಗಿಹಳ್ಳಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೋಗುವ ಮುನ್ನ ಸುದ್ದಿಗಾರರೊಂದಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಮಾತನಾಡಿದರು.
Be the first to comment