ರಾಜ್ಯ ಸುದ್ದಿಗಳು
ದೊಡ್ಡಬಳ್ಳಾಪುರ
ವೈದ್ಯರು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ರಕ್ತದಾನ ಮಾಡಿದ ಸಂದರ್ಭ ಆತ್ರೆಯ ಆಯುರ್ವೇದಿಕ್ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು
ಹೌದು ದೊಡ್ಡಬಳ್ಳಾಪುರ ತಾಲ್ಲೂಕಿನ ಆತ್ರೆಯ ಆಯುರ್ವೇದಿಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ನವೋದಯ ಚಾರಿಟಬಲ್ ಟ್ರಸ್ಟ್ ನ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ನೇತ್ರದಾನ ಮತ್ತು ತಂಬಾಕು ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಜೊತೆಗೆ ರಕ್ತದಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆಡಳಿತವರ್ಗ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾದರು ಈ ರಕ್ತದಾನ ಶಿಬಿರದಲ್ಲಿ ಸುಮಾರು 68 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು
ಕಾರ್ಯಕ್ರಮ ಕುರಿತು ಕಾಲೇಜಿನ ಪ್ರಾಂಶುಪಾಲ ರಘುನಾಥ್ ಮಾತನಾಡಿ ತಂಬಾಕು ನಿಯಂತ್ರಣ ಮತ್ತು ನೇತ್ರದಾನವನ್ನು ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಜೊತೆಗೆ ರಕ್ತದಾನದ ಕಾರ್ಯಕ್ರಮವನ್ನು ಹಮಿಕೊಂಡಿದ್ದು ಅತ್ರೆಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ವಯಿಚ್ಛೆಯಿಂದ ರಕ್ತದಾನ ಮಾಡಿರುವುದು ಸಂತೋಷ ತಂದುಕೊಟ್ಟಿದೆ ಮುಂದಿನ ದಿನಗಳಲ್ಲಿ ಇದೇ ರೀತಿಯಾಗಿ ಹಲವು ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯ ಮುಖಾಂತರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು ಮತ್ತು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ರಕ್ತದಾನಿಗಳನ್ನು ಅಭಿನಂದಿಸಿದರು
ಆತ್ರೆಯ ಆಯುರ್ವೇದ ಮಹಾವಿದ್ಯಾಲಯದ ಸಂಸ್ಥಾಪಕರಾದ ಡಾಕ್ಟರ್ ಪ್ರಶಾಂತ ಆಚಾರ್ಯ ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವವನ್ನು ರಕ್ತದಾನದಿಂದ ಉಂಟಾಗುವ ಪ್ರಯೋಜನಗಳನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವತೆ ತಿಳಿ ಹೇಳಿದರು ಕಾರ್ಯಕ್ರಮದಲ್ಲಿ ಆತ್ರೇಯ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಹಾಗೂ ನವೋದಯ ಚೇತನ್ ತಂಡ ಉಪಸ್ಥಿತರಿದ್ದರು.
Be the first to comment