ಜಿಲ್ಲಾ ಸುದ್ದಿಗಳು
ಬಾಗಲಕೋಟೆ:ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ನೌಕರರನೊಬ್ಬ ಬಾಲ್ಯವಿವಾಹವಾದ ನಡೆದ ಘಟನೆಯ ಬಗ್ಗೆ ಓರ್ವ ವಿದ್ಯಾರ್ಥಿ ವಿಷಯವನ್ನು ಪ್ರಸ್ತಾಪಿಸಿದ್ದು, ಈ ಕುರಿತು ಪೋಸ್ಕೋ ಕಾಯ್ದೆಯಡಿ ಪ್ರಕರಣದ ದಾಖಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ನೂತನ ಸಭಾಭವನದಲ್ಲಿ ಮಂಗಳವಾರ ನಡೆದ ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ಬೆಳಗಾವಿ ವಿಭಾಗ ಮಟ್ಟದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಇಂತದೊಂದು ಓರ್ವ ವಿದ್ಯಾರ್ಥಿಯಿಂದ ಇಂತದೊಂದು ವಿಷಯ ಪ್ರಸ್ತಾಪವಾಗೊಂಡಿತು. ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಸಾಕಷ್ಟು ಬಾಲ್ಯವಿವಾಹ ಜರುಗಿವೆ. ಇಂತಹ ಪ್ರಕರಣಗಳಿಗೆ ಶಿಕ್ಷೆಯಾಗದ ಹೊರತು ಬಾಲವ್ಯ ವಿವಾಹ ತಡೆಯಲು ಸಾದ್ಯವಾಗುವದಿಲ್ಲವೆಂದು ವಿದ್ಯಾರ್ಥಿ ತಿಳಿಸಿದರು.
ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಆಯೋಗದ ಅಧ್ಯಕ್ಷರಾದ ಡಾ.ಅಂತೋಣಿ ಸೆಬಾಸ್ಟಿಯನ್ ಮಕ್ಕಳ ಎಲ್ಲ ಸಮಸ್ಯೆಗಳಿಗೆ ಸ್ಪಂಧಿಸಿದರು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳಗಾವಿ ಹಾವೇರಿ, ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಮಕ್ಕಳ ತಮ್ಮಗೆ ಉಂಟಾದ ಸಮಸ್ಯೆಗಳನ್ನು ಆಯೋಗದ ಮುಂದಿಟ್ಟರು. ತಂದೆ-ತಾಯಿಯನ್ನು ಕಳೆದುಕೊಂಡು ಸಂಬಂಧಿಕರ ಮನೆಯಲ್ಲಿ ತೊಂದರೆ ಪಡುತ್ತಿರುವ ಬಗ್ಗೆ ವಿದ್ಯಾರ್ಥಿ ಅಳಲನ್ನು ಆಲಿಸಿದ ಆಯೋಗದ ಅಧ್ಯಕ್ಷರು ತಕ್ಷಣ ರೆಸ್ಕ್ಯೂ ಮಾಡಿ ಬಾಲಕಿಯರ ಬಾಲ ಮಂದಿರಕ್ಕೆ ಸೇರಿಸುವ ಮಾಡಿದರು.
ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿಯಾದ ಬಗ್ಗೆ ಸಂಬಂಧಿಸಿದ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಗಮನ ಹರಿಸಬೇಕು. ಅಂತಹವರು ಕಂಡುಬಂದಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡುವಂತೆ ಸೂಚಿಸಿದರು. ಬಾಲವ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದಲ್ಲಿ ಪೊಲೀಸ್ ಇಲಾಖೆಯವರು ಸ್ವಯಂ ಪ್ರೇರಿತವಾಗ ಪ್ರಕರಣ ದಾಖಲಿಸಿಕೊಳ್ಳಲು ಸೂಚಿಸಿದರು. ವಿವಿಧ ಜಿಲ್ಲೆಯಿಂದ ಆಗಮಿಸಿದ ಮಕ್ಕಳು ತಮ್ಮ ತಮ್ಮ ಸಮಸ್ಯೆಗಳು ಆಯೋಗದ ಅಧ್ಯಕ್ಷರ ಮುಂದೆ ಇಟ್ಟರು.
ಶಾಲೆಯಲ್ಲಿ ಶಿಕ್ಷಕರ ಕೊರತೆ, ಹೊಸದಾಗಿ ಪ್ರೌಢಶಾಲೆ ಮಂಜೂರು, ಬಾಲಕಾರ್ಮಿಕ ಪದ್ದತಿ, ಶಾಲೆಗೆ ಹೋಗಲು ಬಸ್ ಸೌಲಭ್ಯ, ನರೇಗಾದಡಿ ಬಾಲಕಾರ್ಮಿಕರು ದುಡಿಸಿಕೊಳ್ಳುತ್ತಿರುವುದು, ಮಕ್ಕಳಿಂದ ಬೀಕ್ಷಾಟನೆ ತಡೆಯವುದು, ಚುನಾವಣಾ ಪ್ರಚಾರಕ್ಕಾಗಿ ಶಾಲಾ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ಸೇರಿದಂತೆ ಇತರೆ ಸಮಸ್ಯೆಗಳನ್ನು ಆಯೋಗದ ಮುಂದಿಟ್ಟರು. ಈ ಬಗ್ಗೆ ಕೂಲಂಕೂಷವಾಗಿ ಸಮಸ್ಯೆಯನ್ನು ಆಲಿಸಿದ ಡಾ.ಅಂತೋಣಿಯವರು ಸಮಸ್ಯೆಗಳಿಗೆ ಪರಿಹಾರ ನೀಡುವುದ ಸಲುವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಕಾಲಮಿತಿಯ ಗಡುವು ನೀಡಿದರು. ಕೆಲವೊಂದು ಸಮಸ್ಯೆಗಳಿಗೆ ಸ್ವಯಂ ಪ್ರೇರಿತವಾಗಿ ಪ್ರಕರಗಳನ್ನು ದಾಖಲಿಸಿಕೊಂಡರು.
ಕಾರ್ಯಕ್ರಮದ ಪೂರ್ವದಲ್ಲಿ ಮಕ್ಕಳ ರಕ್ಷಣಾ ಘಟಕದ ಧ್ವಜವನ್ನು ಹಾರಿಸುವ ಮೂಲಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಅಂತೋಣಿ ಸೆಬಾಸ್ಟಿಯನ್ ಕಾರ್ಯಕ್ರಮ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮಾತನಾಡಿ ಕೋವಿಡ್ ಹಿನ್ನಲೆಯಲ್ಲಿ ನೇರವಾಗಿ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀರಿದ್ದು, ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಒದಗಿಸಿದ ಆಯೋಗಕ್ಕೆ ಅಭಿನಂದನೆ ಸಲ್ಲಿಸಿದರು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯೆ ಭಾರತಿ ವಾಳ್ವೇಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಾಲಕಿಯ ಬಾಲಕಮಂದಿರದ ಮಕ್ಕಳು ನೃತ್ಯ ಪ್ರದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ರಾಘವೇಂದ್ರ ಎಚ್, ಪರಶುರಾಮ ಎಂ.ಎಲ್, ಶಂಕರಪ್ಪ ಡಿ, ಡಾ.ಜಯಶ್ರೀ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ನಿರೂಪಣಾಧಿಕಾರಿ ರಮೇಶ ಸೂಳಿಕೇರಿ, ಮಕ್ಕಳ ರಕ್ಷಣಾಧಿಕಾರಿ ಕೇಶವದಾಸ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment