ರಾಜ್ಯ ಸುದ್ದಿಗಳು
ಕಾರವಾರ
ಕಾಳಿ ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೋಟ್ ಮೂಲಕ ತೆರಳಿ ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಉಪವಿಭಾಗಾಧಿಕಾರಿಗಳು ಪರಿಶೀಲನೆ ನಡೆಸಿದರು. ನಗರದ ಸುಂಕೇರಿ ನಂದನಗದ್ದಾ, ಗಾಬಿತವಾಡ, ನದಿವಾಡ ಪ್ರದೇಶಗಳಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಮರಳು ಅಡ್ಡೆ ಮೇಲೆ ದಾಳಿ ನಡೆಸಿ ಸುಮಾರು 45 ಟನ್ ಗಳಷ್ಟು ಮರಳನ್ನು ವಶಕ್ಕೆ ಪಡೆಯಲಾಯಿತು.
ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ ಕಾರವಾರ, ಪೋಲೀಸ್ ವೃತ್ತ ನಿರೀಕ್ಷಕರು ಕಾರವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಕಂದಾಯ ಮತ್ತು ಪೋಲೀಸ್ ಇಲಾಖೆಗಳ ಸಿಬ್ಬಂದಿಗಳು ಇದ್ದರು. ಅಕ್ರಮವಾಗಿ ಮರಳು ತೆಗೆಯುವುದನ್ನು ತಡೆಯಲಾಗಿದ್ದು, ಸೂಕ್ತ ಕಾನೂನು ಕ್ರಮದ ಎಚ್ಚರಿಕೆ ನೀಡಲಾಯಿತು. ತಹಶಿಲ್ದಾರರ ಎನ್. ನರೋನಾ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು. ವಶಕ್ಕೆ ಪಡೆದ ಮರಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಬಳಸಿಕೊಳ್ಳಲು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು ಎಂದು ಉಪವಿಭಾಗಾಧಿಕಾರಿಗಳಾದ ವಿದ್ಯಾಶ್ರೀ ಚಂದರಗಿ ಹೇಳಿದ್ದಾರೆ.
Be the first to comment