ರಾಜ್ಯ ಸುದ್ದಿಗಳು
ಬೆಂಗಳೂರು
ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ವರುಣನ ಆರ್ಭಟ ಕಡಿಮೆಯಾಗಿಲ್ಲ ಈ ಕುರಿತಾಗಿ ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್ ರವರು ಜಿಲ್ಲಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ರಜೆ ಘೋಷಿಸುವಂತೆ ಮೌಖಿಕವಾಗಿ ಸೂಚಿಸಲಾಗಿದೆ
ಸದರಿ ಜಿಲ್ಲಾಧಿಕಾರಿಗಳು ಮೌಖಿಕವಾಗಿ ಸೂಚಿಸಿರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಿನಾಂಕ 19 11 2021 ಹಾಗೂ 20 11 2021 ದಿನಗಳ ಅವಧಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆಯನ್ನು ಘೋಷಿಸಿದೆ.ಈ ಎರಡು ದಿನಗಳ ರಜಾ ಅವಧಿಯನ್ನು ಮುಂದಿನ ಎರಡು ಶನಿವಾರಗಳಂದು ಪೂರ್ಣ ಅವಧಿಯ ತರಗತಿಗಳನ್ನು ನಡೆಸಿ ಸದುಪಯೋಗಪಡಿಸಿಕೊಳ್ಳಲು ತಿಳಿಸಿದೆ
Be the first to comment