ಜಿಲ್ಲಾ ಸುದ್ದಿಗಳು
ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಅಪರಿಚಿತ ಯಾತ್ರಾರ್ಥಿಯೊಬ್ಬರು ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಬಳಿ ನ. 16 ರಂದು ಅಸೌಖ್ಯದಿಂದ ಬಳಲುತ್ತಿರುವುದನ್ನು ಕಂಡ ಸ್ಥಳೀಯರು ಆತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆ ವ್ಯಕ್ತಿಯು ನಿನ್ನೆ ಮೃತಪಟ್ಟ ಘಟನೆ ನಡೆದಿದೆ.
ಅಂದಾಜು 35 ರಿಂದ 40 ವರ್ಷ ಪ್ರಾಯದ ಈ ಅಪರಿಚಿತ ವ್ಯಕ್ತಿಯ ಮೃತ ಶರೀರವು ಮಂಗಳೂರು ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ಶವಾಗಾರ ದಲ್ಲಿದ್ದು, ಈ ವ್ಯಕ್ತಿಯ ವಾರೀಸುದಾರರು, ಸಂಬಂಧಿಕರು ಯಾರಾದರೂ ಇದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment