ಜಿಲ್ಲಾ ಸುದ್ದಿಗಳು
ಕನಕದಾಸರುಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ. ನಾಲತವಾಡ ಪಟ್ಟಣದ ಬಸ್ ನಿಲ್ದಾಣ ಮುಂದೆ ಇರುವ ಕನಕದಾಸ ವೃತ್ತದಲ್ಲಿ ಇಂದು 524 ನೇ ಕನಕದಾಸರ ಜಯಂತಿಯನ್ನು ಆಚರಣೆ ಮಾಡಿದರು ಇ ವೇಳೆ ಮಲ್ಲಿಕಾರ್ಜುನ. ಕಂಗಳ ಮಾತನಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕೇಲವಕೆಲವು ಬ್ರಾಹ್ಮಣೆತರ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ಜನನಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ತತ್ವ ಪದಗಳನ್ನು ರಚಿಸಿದ್ದಾರೆ. ಇ ವೇಳೆ. ಜುಮ್ಮಣ್ಣ ಜೋಗಿ ಹನುಮಂತ ಕುರಿ ಹನುಮಂತ ತೊಗರಿ ನಾನಾ ಸಾಹೇಬ ದೇಶಮುಖ ಸಿದ್ದಪ್ಪ ಡೆರೇದ ಖಾಜಹುಸೇನ ಎತ್ತಿನಮನಿ ಚಂದ್ರು ಗಂಗನಗೌಡ್ರ ಶರಣಪ್ಪ ತೊಗರಿ ದ್ಯಾಮಣ್ಣ ಮೇಟಿ ಮಲ್ಲು ಜೋಗಿ ಶಿವಪ್ಪ ತೊಗರಿ. ಹಾಗೂ ಎಲ್ಲಾ ಸಮಾಜದ ಗಣ್ಯರು ಇದ್ದರು.
Be the first to comment