ರಾಜ್ಯ ಸುದ್ದಿಗಳು
ದೇವನಹಳ್ಳಿ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸುವ ಅಗ್ನಿ ಅವಘಡ ತಡೆಗಟ್ಟಲು ಮೊದಲ ಬಾರಿಗೆ ಬೆಂಗಳೂರು ವಿಮಾನ ನಿಲ್ದಾಣ ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್ ಯಂತ್ರವನ್ನು ಬಳಸಿ ಬಿಐಎಎಲ್‌ನಿಂದ ಪರಿಚಯಿಸಲಾಗುತ್ತಿದೆ ಎಂದು ಬಿಐಎಎಲ್ ಸಿಇಒ ಜಯರಾಜ್ ಷಣ್ಮುಗಂ ತಿಳಿಸಿದರು. ಈ ಬಗ್ಗೆ ಮಾತನಾಡಿದ ಅವರು ಬೆಂಗಳೂರು ವಿಮಾನ ನಿಲ್ದಾಣದ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ರೋಸೆನ್‌ಬೌರ್ ಫೈರ್‌ಫೈಟಿಂಗ್ ಸಿಮ್ಯುಲೇಟರ್‌ನನ್ನು ಪರಿಚಯಿಸಲಾಗುತ್ತಿದೆ. ಇದು ಯಾವುದೇ ರೀತಿಯ ಅಗ್ನಿ ಅವಘಡವಾದರೂ ಕೂಡಲೇ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ಈ ಅತ್ಯಾಧುನಿಕ ತಂತ್ರಜ್ಞಾನದ ಅಗ್ನಿಶಾಮಕವನ್ನು ಭಾರತದ ಯಾವುದೇ ವಿಮಾನ ನಿಲ್ದಾಣದ ತಂಡ ಇಲ್ಲಿಗೆ ಆಗಮಿಸಿ ಇದರ ತರಬೇತಿ ಪಡೆಯಲು ಸಹ ಮುಕ್ತ ಅವಕಾಶವನ್ನು ಒದಗಿಸಿಕೊಡಲಾಗಿದೆ. ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ಸಂದರ್ಭದಲ್ಲಿ ಹೊತ್ತಿಕೊಳ್ಳುವ ಅಗ್ನಿ ಅವಘಡವನ್ನು ತುರ್ತಾಗಿ ಆರಿಸುವಲ್ಲಿ ಈ ಅತ್ಯಾಧುನಿಕ ಸಿಮ್ಯುಲೇಟರ್ ಕೆಲಸ ಮಾಡಲಿದೆ. ರೋಸನ್‌ಬೌರ್ ಸಿಮ್ಯುಲೇಟರ್‌ನ ಎರಡು ಫ್ಯಾಂಥರ್ ೬ ಟ್ರಕ್‌ಗಳು, ಹಾಗೂ ೮ ಟ್ರಕ್‌ಗಳನ್ನು ಇರಿಸಲಾಗಿದೆ. ಈ ಟ್ರಕ್‌ಗಳಲ್ಲಿ ಎರಡು ಹೈರೀಚ್ ಎಕ್ಸ್ಟೆಂಡೆಬಲ್ ಟರೆಟ್ಸ್ (ಎಚ್‌ಆರ್‌ಇಟಿ)ಯನ್ನು ಒಳಗೊಂಡಿದ್ದು, ಈ ಮಟ್ಟದ ಸುಸಜ್ಜಿತ ಟ್ರಕ್‌ಗಳನ್ನು ದಕ್ಷಿಣಏಷ್ಯಾದಲ್ಲಿಯೇ ಯಾವ ವಿಮಾನ ನಿಲ್ದಾಣಗಳು ಒಳಗೊಂಡಿಲ್ಲ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಆದ್ಯತೆ. ರೋಸೆನ್‌ಬೌರ್ ಸಿಎಫ್‌ಟಿ ಮೂಲಕ ಕಠಿಣವಾದ ಅಗ್ನಿ ಅವಘಡದ ಸಂದರ್ಭದಲ್ಲಿ ಈ ಸಿಮ್ಯುಲೇಟರ್ ಚಾರ್ತುಯದಿಂದ ಅಗ್ನಿಯನ್ನು ಶಮನ ಮಾಡಲಿದೆ. ವಿಮಾನ ನಿಲ್ದಾಣದಲ್ಲಿರುವ ಅಗ್ನಿಶಾಮಕ ದಳದವರಿಗೆ ಈ ಸಿಮ್ಯುಲೇಟರ್‌ನನ್ನು ಬಳಸುವ ವಿಧಾನವನ್ನು ತರಬೇತಿ ನೀಡಲಾಗಿದೆ. ಅದರಲ್ಲೂ ಕಮಾಂಡ್ ನಿಯಂತ್ರಕರು, ಮೂಲ ಚಾಲಕರು, ಪೋಸಿಶನಿಂಗ್ ಇನ್ಸಿಡೆಂಟ್ ಕಮಾಂಡರ್‌ಗಳು, ಕ್ಯೂ ಕಮಾಂಡರ್‌ಗಳು ಹಾಗೂ ಅಗ್ನಿಶಾಮಕ ಮುಂಚೂಣಿ ಸಿಬ್ಬಂದಿಗೆ ಈ ತರಬೇತಿಯನ್ನು ಕಡ್ಡಾಯವಾಗಿ ನೀಡಲಾಗುವುದು ಎಂದು ವಿವರಿಸಿದರು.
Be the first to comment