ರಾಜ್ಯ ಸುದ್ದಿಗಳು
ಕಾರವಾರ
ಮುರ್ಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವದು. ದೇವಸ್ಥಾನಕ್ಕೆ ಸೋಮವಾರದಿಂದಲೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಅರಗಾ ಜ್ಞಾನೇಂದ್ರ ರವರು ತಿಳಿಸಿದ್ದಾರೆ.ಸಿದ್ದಾಪುರ ತಾಲ್ಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಅವರು ಮಾಧ್ಯಮದವರ ಜತೆ ಮಾತನಾಡಿದರು.
ರಾಜ್ಯದ ಕರಾವಳಿ ಭಾಗದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ನೆರವು ಕೇಳಿದ್ದೇವೆ. ಕರಾವಳಿ ಕಾವಲು ಪಡೆಗೆ 30 ಸುಸಜ್ಜಿತ ಬೋಟ್‌ಗಳ ಬೇಡಿಕೆಯನ್ನೂ ಇಡಲಾಗಿದೆ,ದೇಶದ್ರೋಹ ಚಟುವಟಿಕೆಯಲ್ಲಿ ಭಟ್ಕಳವೂ ಸೇರಿದಂತೆ ಕರಾವಳಿ ಭಾಗದ ಹಲವು ಯುವಕರು ಪಾಲ್ಗೊಳ್ಳುತ್ತಿರುವ ಸಂಶಯವಿದ್ದು, ಈ ಬಗ್ಗೆ ನಿಗಾ ಇಡಲಾಗುತ್ತಿದೆ. ಮೋದಿ ಸರ್ಕಾರ ಬಂದ ಮೇಲೆ ಬಾಂಬ್ ಸ್ಫೋಟದಂತಹ ಚಟುವಟಿಕೆ ತಗ್ಗಿದೆ’ ಎಂದರು.ಇನ್ನು ಎಸ್.ಡಿ.ಪಿ.ಐ., ಪಿ.ಎಫ್.ಐ. ಸಂಘಟನೆ ನಿಷೇಧಿಸುವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟದ್ದು, ಎಂದರು.
Be the first to comment