ಜಿಲ್ಲೆಯಾದ್ಯಂತ ಸಂವಿದಾನ ದಿನ ಆಚರಣೆ ನಾಳೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ : ದೇಶದಾದ್ಯಂತ 75ನೇ ಸ್ವಾತಂತ್ರೋತ್ಸವದ ವರ್ಷವನ್ನು ಆಜಾದಿ ಕಾ ಅಮೃತ ಮಹೋತ್ಸವ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷ ನವೆಂಬರ 26 ರಂದು ಸಂವಿಧಾನ ದಿನವನ್ನು ಜಿಲ್ಲೆಯಾದ್ಯಂತ‌ ಆಚರಿಸಲಾಗುತ್ತಿದೆ.

ಜಿಲ್ಲಾಡಳಿತದ ವತಿಯಿಂದ ನವೆಂಬರ‌ 26 ರಂದು ಬೆ.10 ಗಂಟೆಗೆ ಜಿ.ಪಂ ಸಭಾಭವನದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ದಿನ ಆಚರಿಸಲಾಗುತ್ತದೆ.ಕಾರ್ಯಕ್ರದಲ್ಲಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಪಾಲ್ಗೊಳ್ಳುತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸಂವಿಧಾನ ದಿನದ ಅಂಗವಾಗಿ ನಮ್ಮ ಸಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ ರಾಷ್ಟ್ರೀಯ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲ ಸರಕಾರಿ ಕಚೇರಿ, ಶಾಲಾ, ಕಾಲೇಜು, ಸಂಸ್ಥೆಗಳು ಸೇರಿದಂತೆ ಭಾರತದ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವದರ ಮೂಲಕ ಕೋವಿಡ್ ನಿಯಮಗಳನ್ಮು ಪಾಲಿಸಿ, ಅರ್ಥಪೂರ್ಣವಾಗಿ ಸಂವಿಧಾನ ದಿನವನ್ನು ಆಚರಿಸುವಂತೆ ಸರಕಾರ‌ ನಿರ್ದೇಶಿಸಿದೆ‌‌ ಎಂದು ಪೋತದಾರ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*