ಜಿಲ್ಲಾ ಸುದ್ದಿಗಳು
ಹೊನ್ನಾವರ
ಬ್ಲಾಕ್ ಕಾಂಗ್ರೆಸ್ ಸಮಿತಿಯು ವಿಧಾನ ಪರಿಷತ್ ಅಭ್ಯರ್ಥಿ ಭೀಮಣ್ಣಾ ನಾಯ್ಕ ಪರ ಚುನಾವಣಾ ಪ್ರಚಾರ ಸಭೆಯನ್ನು ಪಟ್ಟಣದ ಸಾಗರ್ ರೆಸಿಡೆನ್ಸಿಯಲ್ಲಿ ಏರ್ಪಡಿಸಿತ್ತು.ಮಾಜಿ ಸಚಿವ ಆರ್.ವಿ.ದೇಶಪಾಂಡೆಯವರು ಮಾತನಾಡಿ ಈಗಿನ ಬಿಜೆಪಿ ಸರ್ಕಾರ ಪಂಚಾಯತ್ ವ್ಯವಸ್ಥೆಯನ್ನೇ ಸಂಪೂರ್ಣ ಹದಗೆಡಿಸಿದ್ದು, ಬಡವರಿಗೆ ಒಂದೇ ಒಂದು ಮನೆ ಮಂಜೂರು ಮಾಡಲಾಗದ ಇಷ್ಟು ಕೆಳಮಟ್ಟದ ಸರ್ಕಾರವನ್ನು ನನ್ನ 50 ವರ್ಷದ ರಾಜಕಾರಣದ ಅವಧಿಯಲ್ಲಿಯೇ ನೋಡಿಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕಿಡಿ ಕಾರಿದರು. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಅಭ್ಯರ್ಥಿ ಭೀಮಣ್ಣಾ ನಾಯ್ಕ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಪಂ ಚುನಾವಣೆಯಲ್ಲಿ ಜನರಿಗೆ ಆಶ್ವಾಸನೆ ಕೊಟ್ಟು ಆಯ್ಕೆಯಾದ ಸದಸ್ಯರಿಗೆ ಈ ಬಿಜೆಪಿ ಸರ್ಕಾರ ಯಾವುದೇ ಅನುದಾನ, ಬಡವರಿಗೆ ಮನೆ, ಕುಡಿಯುವ ನೀರು, ವಿದ್ಯುತ್ ಇತ್ಯಾದಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುದಾನ ಬರುತ್ತಿಲ್ಲ. ಪಂಚಾಯತ್ ಪ್ರತಿನಿಧಿಗಳು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಆರಿಸಿ ತರಬೇಕೆಂದು ವಿಧಾನ ಪರಿಷತ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭೀಮಣ್ಣಾ ನಾಯ್ಕ ಹೇಳಿದರು.
ನನ್ನ ಅವಧಿಯಲ್ಲಿ ಹೊನ್ನಾವರಕ್ಕೆ ಅತೀ ಹೆಚ್ಚು ಅನುದಾನವನ್ನು ನೀಡಿದ್ದೇನೆ. ಆದರೆ ಈಗಿನ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರ ತಂದಿರುವ ಸಾಕಷ್ಟು ಕಾಮಗಾರಿಗಳಿಗೆ ಪುನಃ ಶಂಕು ಸ್ಥಾಪನೆ ನೆರವೇರಿಸುವ ಮೂಲಕ ಮತ್ತದೇ ಕಾಮಗಾರಿಗೆ ಚಾಲನೆ ನೀಡಿ ಜನರ ದಿಕ್ಕು ತಪ್ಪಿಸುತ್ತಿದೆ. ಈಗ ಕೆಲಸ ನಡೆಯುತ್ತಿರುವ ಬಹುತೇಕ ಕಾಮಗಾರಿಗಳು ನಮ್ಮ ಸರ್ಕಾರದ ಅವಧಿಯಲ್ಲಿಯೇ ಮಂಜೂರಾಗಿ ಉದ್ಘಾಟನೆಗೊಂಡಿದೆ. ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರ ತಂದಿರುವ ಕಾಮಗಾರಿಗಳನ್ನೇ ಮರುಶಂಕುಸ್ಥಾಪನೆ ಮಾಡುತ್ತಿರುವುದು ದುರಂತ ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಬೇಸರ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಮಾಜಿ ಶಾಸಕಿ ಶಾರದಾ ಶೆಟ್ಟಿ, ವಿಧಾನ ಪರಿಷತ್ ಅಭ್ಯರ್ಥಿ ಭೀಮಣ್ಣಾ ನಾಯ್ಕ, ಕೆಪಿಸಿಸಿ ಕಾರ್ಯದರ್ಶಿ ನಿವೇದಿತ ಆಳ್ವಾ, ಮಾಜಿ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಮಾಜಿ ಜಿಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ನಾಗರಾಜ್ ನಾರ್ವೇಕರ್, ಜಿಲ್ಲಾ ಮಹಿಳಾ ಕಾಂಬಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ್, ಜಿಲ್ಲಾ ಕಾರ್ಯದರ್ಶಿ ಎಂ.ಎನ್.ಸುಬ್ರಹ್ಮಣ್ಯ, ಮುಖಂಡರಾದ ಸಾಯಿ ಗಾಂವಕರ್, ರಾಮಾ ಮೊಗೇರ್, ಮಜೀದ್ ಭಟ್ಕಳ ವಿವಿಧ ಸೆಲ್‍ಗಳ ಅಧ್ಯಕ್ಷರು, ಕಾರ್ಯಕರ್ತರು, ಗ್ರಾಪಂ ಹಾಗೂ ಪಪಂ ಸದಸ್ಯರು ಹಾಜರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಪ್ರಸ್ತಾವಿಕ ಮಾತನಾಡಿದರು.
Be the first to comment