ರಾಜ್ಯ ಸುದ್ದಿಗಳು
ಮಂಗಳೂರು
ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ.
ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಎಂದಿನಂತೆ ಮನೆಗೆ ಮರಳಿದ್ದಳು. ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ನೋಡುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment