ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಘಟಕದ ಮನವಿ..

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ರಾಜ್ಯ ಸುದ್ದಿದಳು 

ಹೊನ್ನಾವರ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ ಅನಾಗರಿಕವಾಗಿ ಅಪಮಾನ ಮಾಡಿರುವುದನ್ನು ಖಂಡಿಸಿ ಉತ್ತರ ಕನ್ನಡ ಮಹಿಳಾ ಕಾಂಗ್ರೆಸ್ ಘಟಕದ ಪ್ರಮುಖರು ಹೊನ್ನಾವರ ಪೊಲೀಸ್ ಅಧಿಕಾರಿಗಳ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.

CHETAN KENDULI

ಉತ್ತರ ಕನ್ನಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. `ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಒಬ್ಬ ಮಹಿಳಾ ಶಾಸಕಿಗೆ ಬಹಿರಂಗವಾಗಿ ಮಾಧ್ಯಮಗಳ ಎದುರೇ ನಿಂದಿಸಿದ್ದಾರೆ. ರಾಜ್ಯದ ಅಸಂಖ್ಯಾತ ಮಹಿಳೆಯರು, ಮಕ್ಕಳು ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನು ವೀಕ್ಷಿಸುತ್ತಾರೆ ಎಂಬ ಪರಿಜ್ಞಾನವಿಲ್ಲದ ಹೇಳಿಕೆ ನೀಡಿರುವ ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣ ಮಾಡಲು ಪ್ರೇರಣೆ ನೀಡಿದ್ದಾರೆ. ಅಸಹ್ಯವಾಗಿ ಮಹಿಳೆಯ ಘನತೆಗೆ ಧಕ್ಕೆ ತರುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಗೌರವಕ್ಕೆ ಚ್ಯುತಿ ತಂದಿರುವ ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು’ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮಾಜಿ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಮಾಜಿ ಜಿಪಂ ಸದಸ್ಯೆ ಪುಷ್ಪಾ ನಾಯ್ಕ, ಹೊನ್ನಾವರ ಮಹಿಳಾ ಬ್ಲಾಕ್ ಅಧ್ಯಕ್ಷೆ ಪುಷ್ಪಾ ಮಹೇಶ, ಮಂಕಿ ಮಹಿಳಾ ಬ್ಲಾಕ್ ಅಧ್ಯಕ್ಷೆ ಉಷಾ ನಾಯ್ಕ, ಮಾಜಿ ತಾಪಂ ಸದಸ್ಯೆ ಲಕ್ಷ್ಮೀ ಗೊಂಡ ಸೇರಿದಂತೆ ವಿವಿಧ ಭಾಗಗಳ ಮಹಿಳಾ ಸದಸ್ಯರು ಉಪಸ್ತಿತರಿದ್ದರು.

Be the first to comment

Leave a Reply

Your email address will not be published.


*