ರಾಜ್ಯ ಸುದ್ದಿಗಳು
ದೇವನಹಳ್ಳಿ
ಕನ್ನಡ ರಾಜ್ಯೋತ್ಸವ ಕೆವಲ ನ.1ಕ್ಕೆ ಮಾತ್ರ ಸೀಮಿತವಾಗದೆ ನಿತ್ಯ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ಕೆಪಿಸಿಸಿ ಸದಸ್ಯ ಎ.ಸಿ.ಶ್ರೀನಿವಾಸ್ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹಳೆ ಬಸ್ ನಿಲ್ದಾಣದ ಕಾರ್‌ಮಾಲಿಕರು ಮತ್ತು ಚಾಲಕರ ಸಂಘದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಹಾಗು ಪುನೀತ್ ರಾಜ್‌ಕುಮಾರ್‌ಗೆ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ನಾಡು ನುಡಿ ಸಂಸ್ಕೃತಿಗೆ ಪ್ರಥಮ ಆದ್ಯತೆ ನೀಡಬೇಕು ಕನ್ನಡಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಬೇಕು. ಪೋಷಕರು ಇಂಗ್ಲೀಷ್ ವ್ಯಾಮೋಹ ಬಿಟ್ಟು ಕಸ್ತೂರಿ ಕನ್ನಡವನ್ನು ಮಕ್ಕಳಿಗೆ ತಿಳಿಸುವ ಕೆಲಸವಾಗಬೇಕು ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದರು.
ಪುರಸಭೆ ಸದಸ್ಯ ವೈ.ಆರ್.ರುದ್ರೇಶ್ ಮಾತನಾಡಿ ಪುನೀತ್‌ರಾಜ್‌ಕುಮಾರ್ ನಮ್ಮನ್ನು ಅಗಲಿ ಒಂದು ತಿಂಗಳು ಕಳೆದರು ಸಹ ಅವರ ನೆನಪುಗಳನ್ನು ಎಲ್ಲರನ್ನು ಕಾಡುತ್ತಿದೆ ಪ್ರತಿನಿತ್ಯ ಅವರ ಅಭಿಮಾನಿಗಳು ಅವರದೇ ಆದ ಶೈಲಿಯಲ್ಲಿ ಸಮಾಜಸೇವೆ ಮಾಡುವ ಮೂಲಕ ನಮನವನ್ನು ಸಲ್ಲಿಸುತ್ತಿದ್ದಾರೆ. ಪುನೀತ್‌ರಾಜ್ ಕುಮಾರ್ ಮತ್ತೆ ಹುಟ್ಟಿಬರಲಿ, ಅವರು ಮಾಡುತ್ತಿದ್ದ ಸಮಾಜ ಮುಖಿ ಕೆಲಗಳನ್ನು ಪ್ರತಿಯೊಬ್ಬರು ಅವರ ಜೀವನದಲ್ಲಿ ಅಳವಡಿಸಿಕೊಂಡು ಅವರ ಕೈಲಾದ ಸಮಾಜ ಸೇವೆ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಇದೆ ವೇಳೆ ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಪುರಸಭೆ ಸದಸ್ಯರಾದ ವೇಣುಗೋಪಾಲ್, ಮುಖಂಡರಾದ, ಮಿಥುನ್, ನಾಗೇಶ್, ಹರೀಶ್, ರಮೇಶ್, ನವೀನ್, ನಂದಕುಮಾರ್, ಕನಕ, ಮುನಿರಾಜುದಾಸ್, ಕಟ್ಟಡ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಗೋಪಾಲ್ ದಾಸ್, ಮುನಿರಾಜು, ಅಶೋಕ ಮುಂತಾದವರು ಇದ್ದರು.
Be the first to comment