ಜಿಲ್ಲಾ ಸುದ್ದಿಗಳು
ಭಟ್ಕಳ:
ತಾಲೂಕಿನ ಗುಳ್ಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ದನಗಳನ್ನು ಕದ್ದು ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ಮೂಲದ ಜಲೀಲ್ ಹುಸೇನ್ ಹಾಗೂ ಕಿನ್ನಿಗೋಳಿಯ ಮುಸ್ತಫಾ ಮೊಹಮ್ಮದ್ ಬಂಧಿತ ಆರೋಪಿಗಳು. ಕಾರ್ಯಾಚರಣೆ ವೇಳೆ ಇನ್ನೋರ್ವ ಆರೋಪಿ ತಪ್ಪಿಸಿಕೊಂಡಿದ್ದಾನೆ.
ತಾಲೂಕಿನ ಗುಳ್ಮಿಯಲ್ಲಿನ ಮನೆಯೊಂದರಲ್ಲಿ ಆರೋಪಿಗಳು ವಾಸವಾಗಿದ್ದು ದನಗಳನ್ನು ಕಳ್ಳತನ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಕುಂದಾಪುರದ ಜಬ್ಟಾರ್ ಎಂಬಾತ ತಪ್ಪಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ.
ಆರೋಪಿಗಳಿಂದ ಮಾಂಸ ತೆಗೆದುಕೊಳ್ಳುತ್ತಿದ್ದ ಭಟ್ಕಳದ ಇಬ್ರಾಹಿಂ ಎನ್ನುವವನ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದು ಆತನ ಪತ್ತೆಗೆ ಕೂಡಾ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಮಾರುತಿ ಓಮ್ನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಎಲ್ಲೆಲ್ಲಿ ಕಳ್ಳತನ ಮಾಡಿದ್ದಾರೆ ಎನ್ನುವ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment