ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ..

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಹೊನ್ನಾವರ

12ನೇ ವರ್ಷದ `ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಾಸರಗೋಡು ಎಡನೀರು ಮಠದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಶನಿವಾರ ನಡೆಯಿತು.`ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಖ್ಯಾತ ರಂಗಭೂಮಿ ಕಲಾವಿದೆ ಪದ್ಮಶ್ರೀ ಡಾ. ಬಿ. ಜಯಶ್ರೀ ಬೆಂಗಳೂರು ಅವರಿಗೆ ನೀಡಲಾಯಿತು.

CHETAN KENDULI

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್, ಎಂ. ಎಸ್. ಮಹಾಬಲೇಶ್ವರ ಭಟ್ಟ, ಕವಿ ಡಾ. ಎಚ್.ಎಸ್. ಶಿವಪ್ರಕಾಶ, ನಾ. ರವಿಕುಮಾರ, ಗ್ರಾಪಂ ಅಧ್ಯಕ್ಷ ಗಂಗಾಧರ ಗೌಡ ಇತರರು ಇದ್ದರು. ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ಸ್ವಾಗತಿಸಿದರು.

ಸಭಾಕಾರ್ಯಕ್ರಮದ ನಂತರ ಶ್ರೀ ಕಣ್ಣೇಶ್ವರ ಜಾನಪದ ಕಲಾ ಸಂಘ ಕಣ್ಣೂರು ಇವರಿಂದ ಡೊಳ್ಳು ಕುಣಿತ, ಧರಣಿ ಟಿ. ಕಶ್ಯಪ ಮತ್ತು ತಂಡ, ನಾಟ್ಯ ನಿನಾದ ಅಕಾಡೆಮಿ ಬೆಂಗಳೂರು ಇವರಿಂದ ಕೂಚುಪುಡಿ ನೃತ್ಯನಾಟಕ ಮಂಡೋದರಿ ಕಲ್ಯಾಣ, ಹಾಗೂ ನಾಟಕ ಸ್ಪಂದನ ತಂಡ ಬೆಂಗಳೂರು ಇವರಿಂದ ಲಕ್ಷಾಪತಿ ರಾಜನ ಕತೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

Be the first to comment

Leave a Reply

Your email address will not be published.


*