ಜಿಲ್ಲಾ ಸುದ್ದಿಗಳು
ಕುಮಟಾ
( 07.12.2021 ) ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ಮತಕ್ಷೇತ್ರದ ವಿಧಾನಪರಿಷತ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಪ್ರಚಾರ ಸಭೆ ನಡೆಸಿ, ಅಭ್ಯರ್ಥಿ ಶ್ರೀ ಗಣಪತಿ ಉಳ್ವೇಕರ್ ಅವರ ಪರವಾಗಿ ಮತಯಾಚಿಸಿದರು.
ಉತ್ತರಕನ್ನಡ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಸರಳ ಸಜ್ಜನ ಅಭ್ಯರ್ಥಿ ಶ್ರೀ ಗಣಪತಿ ಉಳ್ವೇಕರ್ ಅವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ದಿನಕರ ಕೆ ಶೆಟ್ಟಿ, ಮಂಡಲಾಧ್ಯಕ್ಷರಾದ ಶ್ರೀ ಹೇಮಂತ ಗಾಂವ್ಕರ್, ಪ್ರಮುಖರಾದ ಶ್ರೀ ವಿನೋದ ಪ್ರಭು, ಶ್ರೀ ಪ್ರಶಾಂತ ನಾಯ್ಕ ಹಾಗೂ ಮಂಡಲದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Be the first to comment