ಜಿಲ್ಲಾ ಸುದ್ದಿಗಳು
ಕುಮಟಾ
ಏಡ್ಸ್ ಜಾಗೃತಿ ಮತ್ತು ರಕ್ತದಾನದ ಮಹತ್ವ ಸಾರುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿದಕ್ಕೆ ಕುಮಟಾ ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾ ವಿದ್ಯಾಲಯಕ್ಕೆ ಜಿಲ್ಲಾ ಮಟ್ಟದ ಉತ್ತಮ ಮಹಾವಿದ್ಯಾಲಯ ೨೦೨೦-೨೧ರ ಪ್ರಶಸ್ತಿ ದೊರೆತಿದೆ.ಕರ್ನಾಟಕ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕಮಲಾ ಬಾಳಿಗಾ ಶಿಕ್ಷಣ ಮಹಾ ವಿದ್ಯಾಲಯದ ಪ್ರಚಾರ್ಯೆ ಪ್ರೊ. ಡಾ. ಪ್ರೀತಿ ಭಂಡಾರಕರ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎನ್ ಸಂತೋಷಕುಮಾರ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಿಲ್ಲಾ ವೈದ್ಯಕೀಯ ಅಧೀಕ್ಷಕ ಡಾ ಶಿವಾನಂದ ಕುಡ್ತಲ್ಕರ್, ಬಾಡದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಡಾ ಶಿವಾನಂದ ನಾಯಕ, ಎನ್‌ಎಸ್‌ಎಸ್ ಅಧಿಕಾರಿ ಡಾ. ರಮೇಶ ರಾಥೋಡ ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಡಿಎಚ್‌ಒ ಡಾ. ಶರದ ನಾಯಕ ವಹಿಸಿದ್ದರು. ವಿದ್ಯಾರ್ಥಿನಿ ಸುಮತಿ ನಾಯ್ಕ ಪ್ರಾರ್ಥಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಮಹಾಬಲೇಶ್ವರ ಹೆಗಡೆ ಅವರು ಪ್ರಾಸ್ತಾವಿಸಿದರು. ಕೆ. ಬಸವರಾಜ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಕಕ್ಕಣನವರ ವಂದಿಸಿದರು.
Be the first to comment