ರೂಪಾಂತರಿ ಒಮಿಕ್ರಾನ್ ತಡೆಗೆ ಜಿಲ್ಲಾಡಳಿತದಿಂದ 5 ಸೂತ್ರ:ಮನರಂಜನಾ ಪ್ರಿಯರಿಗೆ 2 ಡೋಸ್ ಲಸಿಕೆ ಕಡ್ಡಾಯ : ಡಿಸಿ ರಾಜೇಂದ್ರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: ಕೊರೊನಾ ರೂಪಾಂತರಿ ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ 5 ಸೂತ್ರಗಳನ್ನು ಅನುಸರಿಸಲಾಗುತ್ತಿದ್ದು, ಚಿತ್ರ ಮಂದಿರಗಳಲ್ಲಿ ಮನರಂಜನೆ ವೀಕ್ಷಣೆಗೆ 2 ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ರೂಪಾಂತರಿ ಒಮಿಕ್ರಾನ್ ತಡೆಗೆ ಸರಕಾರ ಕೆಲವು ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ 5 ತಂತ್ರಗಳಾದ ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕಾರಣ ಮತ್ತು ಕೋವಿಡ್-19 ಸಮುಚಿತ ನಿಯಂತ್ರಣ ಕ್ರಮ ಅನುಸರಿಸಲಾಗುತ್ತಿದೆ. ಎರಡು ಡೋಜ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್‍ಗಳು, ಸಿನಿಮಾ ಹಾಲ್, ಚಿತ್ರಮಂದಿರಗಳಲ್ಲಿ ಪ್ರವೇಶಕ್ಕೆ ಸರಕಾರ ಅವಕಾಶ ಕಲ್ಪಿಸಿದ್ದು, ಈ ಬಗ್ಗೆ ಸಂಬಂಧಿಸಿದ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸರಕಾರ ಹೊರಡಿಸಿ ಮಾರ್ಗಸೂಚಿಯನ್ವಯ ಶಾಲೆ-ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದುವುದು ಕಡ್ಡಾಯವಾಗಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಕೈಗಾರಿಕಾ ತರಬೇತಿ ಕೇಂದ್ರಗಳು, ಡಿಪ್ಲೋಮಾ, ಪಾಲಿಟೆಕ್ನಿಕ್, ಇಂಜಿನೀಯರಿಂಗ್, ಮೆಡಿಕಲ್ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಕಡ್ಡಾಯವಾಗಿ ತಮ್ಮಲ್ಲಿ ವ್ಯಾಸಂಗ ಮಾಡುತ್ತಿರುವ ಪಾಲಕ, ಪೋಷಕರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳತಕ್ಕದ್ದೆಂದು ತಿಳಿಸಿದ್ದಾರೆ.

ರೂಪಾಂತರಿ ಒಮಿಕ್ರಾನ್ ವೈರಾಣು ಸಂಭವ ಇರುವದರಿಂದ ಜಿಲ್ಲೆಯ ಎಲ್ಲ ವ್ಯಾಪಾರಸ್ಥರು ತಮ್ಮ ಅಂಗಡಿ ಮುಗ್ಗಟ್ಟುಗಳಿಗೆ ಬರುವಂತಹ ಎಲ್ಲ ಗ್ರಾಹಕರಿಗೆ ಕೋವಿಡ್-19 ಎರಡು ಡೋಸ್ ಲಸಿಕೆಯ ಪ್ರಮಾಣ ಪತ್ರ ಪರಿಶೀಲಿಸಿದ ನಂತರವೇ ಸೇವೆಯನ್ನು ಒದಗಿಸುವುದು ಉತ್ತಮ ಕ್ರಿಯೆಯಾಗಿದೆ ಎಂದು ಜಿಲ್ಲಾಡಳಿತದ ಅಭಿಪ್ರಾಯವಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*