ರಾಜ್ಯ ಸುದ್ದಿಗಳು
ಭಟ್ಕಳ
ಉತ್ತರಕನ್ನಡ ಜಿಲ್ಲಾ ಎಸ್‌ಪಿ ಡಾ. ಸುಮನ್.ಡಿ.ಪೆನ್ನೇಕರ್ ಮಂಗಳವಾರ ಭಟ್ಕಳ ಠಾಣೆಗೆ ಭೇಟಿ ನೀಡಿ ಪ್ರಸ್ತುತ ವಿದ್ಯಾಮಾನಗಳ ಕುರಿತು ಪೊಲೀಸ್ ಅಧಿಕಾರಗಳೊಂದಿಗೆ ಚರ್ಚೆ ನಡೆಸಿದರು. ಒಮಿಕ್ರಾನ್ ತಡೆಗೆ ಇಲಾಖೆ ಸಿದ್ದತೆಯ ಕುರಿತು ಮಾಹಿತಿ ನೀಡಿದರು.ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಭಟ್ಕಳ ಠಾಣೆಗೆ ಭೇಟಿ ನೀಡಿದರು. ಇಲ್ಲಿನ ಪ್ರಸ್ತುತ ವಿದ್ಯಾಮಾನಗಳ ಕುರಿತು ಡಿವೈಎಸ್‌ಪಿ, ಸಿಪಿಐ, ಪಿಎಸ್‌ಐ ಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಒಮ್ರಿಕಾನ ತಡೆಗೆ ತಪಾಸಣೆ ಹೆಚ್ಚಿಸಲಾಗಿದ್ದು ಕಾರವಾರದ ಮಾಜಾಳಿ ಮತ್ತು ಭಟ್ಕಳ ತಾಲೂಕಿನ ಶಿರಾಲಿಯ ತಪಾಸಣಾ ಕೇಂದ್ರಗಳನ್ನು ಕೋವಿಡ್ ಗೇಟ್ ಆಗಿ ಪರಿವರ್ತಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಆರೋಪಿಗಳ ಹೆಡೆಮುರಿ ಕಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
Be the first to comment