ರಾಜ್ಯ ಸುದ್ದಿಗಳು
ರಾಜ್ಯಾದ್ಯಂತ ಎಲ್ಲಾ ಶಾಲೆಗಳು ಮತ್ತು ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ (Plastic ban in schools ) ಮಾಡಿ ಶಿಕ್ಷಣ ಇಲಾಖೆಯ (Department of Education) ಆಯುಕ್ತರು ಆದೇಶಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಗೌರವಾರ್ಥ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ.
ಹೀಗಾಗಿ ರಾಜ್ಯಾದ್ಯಂತ ಶಾಲೆಗಳು ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಿ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.ಗ
ಆದೇಶದ ಪ್ರಕಾರ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಪ್ಲೇಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಹಾಗೂ ಥರ್ಮಕೋಲ್ ಹಾಗೂ ಪ್ಲಾಸ್ಟಿಕ್ ಬೀಡ್ಸ್ ಗಳಿಂದ ತಯರಾದ ವಸ್ತುಗಳ ಬಳಕೆಯನ್ನು ರಾಜ್ಯಾದ್ಯಂತ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಜೊತೆಗೆ ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು/ಶಾಲೆಗಳಲ್ಲಿ ಶೈಕ್ಷಣಿಕ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ,ಪ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಹಾಗೂ ಥರ್ಮಕೋಲ್ ಹಾಗೂ ಪ್ಲಾಸ್ಟಿಕ್ ಬೀಡ್ಸ್ ಗಳಿಂದ ತಯಾರದ ವಸ್ತುಗಳ ಬಳಕೆಯನ್ನು ನೀಡುವ ಪದ್ದತಿಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
Be the first to comment