ಕಾಡತಿಪ್ಪೂರು ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವರದಿ ಹರೀಶ್ ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

ದೊಡ್ಡಬಳ್ಳಾಪುರ 

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಕಾಡ ತಿಪ್ಪೂರು ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾಡ ತಿಪ್ಪೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಏರ್ಪಡಿಸಲಾಗಿತ್ತು

CHETAN KENDULI

 ಶಿಬಿರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ ಅರ್ಚನಾ ಮತ್ತು ಡಾ ಅರುಣ್ ಅವರು ಭಾಗವಹಿಸಿದ್ದು ಗ್ರಾಮಸ್ಥರಲ್ಲಿ ಕಂಡುಬರುತ್ತಿದ್ದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ಕುರಿತು ಸಮಾಲೋಚಿಸಿ ಗ್ರಾಮಸ್ಥರಿಗೆ ಚಿಕಿತ್ಸೆ ನೀಡುವ ಜೊತೆಗೆ ಆರೋಗ್ಯ ಮತ್ತು ಶುಚಿತ್ವ ಕಾಪಾಡುವ ಕುರಿತು ಮಾರ್ಗದರ್ಶನ ನೀಡಲಾಯಿತು

 ಸುಗ್ಗಿ ಸಂದರ್ಭದಲ್ಲಿ ರಾಗಿ ಜೋಳ ಮತ್ತಿತರ ಬೆಳೆಗಳು ಕಟಾವಿಗೆ ಬಂದಿರುವ ಕಾರಣ ಶಿಬಿರವು ಅಂದುಕೊಂಡಷ್ಟು ಮಟ್ಟಿಗೆ ಯಶಸ್ವಿ ಕಾಣಲಿಲ್ಲ ವಾದರೂ ಗ್ರಾಮಸ್ಥರು ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ಸಮಸ್ಯೆಗಳನ್ನು ವೈದ್ಯರ ಬಳಿ ಸಮಾಲೋಚಿಸಿ ಪರಿಹಾರ ಕಂಡುಕೊಂಡರು

 ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಮೂರ್ತಿ, ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*