ಜಿಲ್ಲಾ ಸುದ್ದಿಗಳು
ಕಾರವಾರ:
ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲಿದೆ. ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ.
ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಜಾರಿ ಆಗಿರುವ ಉಚಿತ ಸಾರಿಗೆ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಂದಡಿ ಇರಿಸಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ
ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಹೀಗೆ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಯೋಜನೆ ತ್ವರಿತ ಜಾರಿಗೆ ಸಂಬಂಧ ಮಹತ್ವದ ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Be the first to comment