ವಿಧಾನಪರಿಷತ್ ಚುನಾವಣೆ ಹಿನ್ನಲೆ ಮತ ಎಣಿಕೆಗೆ ಜಿಲ್ಲಾಡಳಿತ ಪೂರ್ವ ಸಿದ್ಧತೆ

ವರದಿ ಹೈದರ್ ಸಾಬ್ ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಪಟ್ಟಣದ ಪ್ರಸನ್ನಹಳ್ಳಿ ರಸ್ತೆಯಲ್ಲಿರುವ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿಧಾನಪರಿಷತ್ ಚುನಾವಣೆ ಫಲಿತಾಂಶ ಹಿನ್ನಲೆಯಲ್ಲಿ ನಾಳೆ ನಡೆಯುವ ಮತ ಎಣಿಕೆ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್ ಭೇಟಿ ನೀಡಿ ಪೂರ್ವ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು.ನಾಳೆ ನಡೆಯುವ ಬೆಂಗಳೂರು ಗ್ರಾಮಾಮತರ ಮತ್ತು ರಾಮನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ ಎಣಿಕೆ ಕೇಂದ್ರಗಳನ್ನು ವೀಕ್ಷಿಸಿದ್ದಾರೆ. ಎರಡು ಸ್ಟ್ರಾಂಗ್ ರೂಂಗಳನ್ನಾಗಿಸಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿಡಲಾಗಿದೆ. ಪ್ರತ್ಯೇಕವಾಗಿ ಎರಡು ಕೊಠಡಿಗಳನ್ನು ಮತ ಎಣಿಕೆಗಾಗಿ ಮೀಸಲಿಡಲಾಗಿದೆ. ಶಾಲೆಯ ಆವರಣಕ್ಕೆ ಕೌಂಟಿಂಗ್ ಏಜೆಂಟ್ ಮತ್ತು ಸಿಬ್ಬಂದಿಗಳಿಗೆ ಮಾತ್ರ ಮಾತ್ರ ಪ್ರವೇಶವಿರುತ್ತದೆ. ಉಳಿದಂತೆ ಸಾರ್ವಜನಿಕರಿಗೆ ನಿರ್ಬಂಧ ಮಾಡಲಾಗಿದೆ. 

CHETAN KENDULI

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಒಟ್ಟು ೨೨೮ ಪೋಲಿಂಗ್ ಸ್ಟೇಷನ್ ಇದ್ದು, ೧೪ ಟೇಬಲ್ ವ್ಯವಸ್ಥೆ ಮಾಡಿದ್ದು, ಪ್ರತಿ ಟೇಬಲ್‌ನಲ್ಲಿಯೂ ಒಬ್ಬರು ಕೌಟಿಂಗ್ ಸೂಪರ್‌ವೈಸರ್ ಮತ್ತು ಏಜೆಂಟ್ ಇರುತ್ತಾರೆ. ಸುಮಾರು ೩೮೨೮ಮತಗಳನ್ನು ಎಣಿಕೆ ಪ್ರಕ್ರಿಯೆ ನಡೆಯಲಿದೆ. ಪೊಲೀಸ್ ಬಿಗಿ ಬಂದೋಬಸ್ತ್ ಇರುತ್ತದೆ. ಯಾವುದೇ ಅಹಿತಕರ ಘಟನೆ ಆಗದಂತೆ ಎಚ್ಚರವಹಿಸಲಾಗಿದೆ. ಕೋವಿಡ್ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರಬಾರದು. ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಹದ್ದಿನ ಕಣ್ಣು ಇಡಲಾಗಿದೆ. ಈಗಾಗಲೇ ಎಲ್ಲಾ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಿಲ್‌ಕುಮಾರ್ ಅರೋಲಿಕರ್, ತಾಲೂಕು ಮಟ್ಟದ ಸಿಬ್ಬಂದಿ ವರ್ಗ ಇದ್ದರು.

Be the first to comment

Leave a Reply

Your email address will not be published.


*